ಹನೂರಿನಲ್ಲಿ 9 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಎಕ್ಸಾಂ

ಹನೂರಿನ ಕ್ರಿಸ್ತರಾಜ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಫಲಕದಲ್ಲಿ ಕೊಠಡಿ ಸಂಖ್ಯೆಯನ್ನು ಖಚಿತ ಪಡಿಸಿಕೊಳ್ಳುತ್ತಿರುವುದು.
ಹನೂರಿನ ಕ್ರಿಸ್ತರಾಜ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಫಲಕದಲ್ಲಿ ಕೊಠಡಿ ಸಂಖ್ಯೆಯನ್ನು ಖಚಿತ ಪಡಿಸಿಕೊಳ್ಳುತ್ತಿರುವುದು.
Published on
ಹನೂರು: ಶೈಕ್ಷಣಿಕ ವಲಯದ 9 ಕೇಂದ್ರಗಳಲ್ಲಿ ಬುಧವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, 2,117 ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಬರೆದರು.
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,072 ಬಾಲಕರು, 1,053 ಬಾಲಕಿಯರು ಸೇರಿ ಒಟ್ಟು 2,125 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಹಾಗಾಗಿ ಹನೂರಿನ ಕ್ರಿಸ್ತರಾಜ ಶಾಲೆ, ಜಿ.ವಿ ಗೌಡ ಪ್ರೌಢಶಾಲೆ, ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಶಾಲೆ, ರಾಮಾಪುರದ ಜೆಎಸ್‌ಎಸ್ ಪ್ರೌಢಶಾಲೆ, ಮಾರ್ಟಳ್ಳಿಯ ಸೆಂಟ್ ಮೇರಿಸ್ ಪ್ರೌಢಶಾಲೆ, ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆ, ಮಣಗಳ್ಳಿಯ ಸರ್ಕಾರಿ ಪ್ರೌಢಶಾಲೆ, ಕೌದಳ್ಳಿಯ ಸಂತ ಅಂತೋಣಿ ಪ್ರೌಢಶಾಲೆ ಹಾಗೂ ಹೂಗ್ಯಂನ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪರೀಕ್ಷಾ ಕೇಂದ್ರವಾಗಿ ನಿಗದಿಪಡಿಸಲಾಗಿತ್ತು. ಬುಧವಾರ ನಡೆದ ಕನ್ನಡ ಪರೀಕ್ಷೆಯಲ್ಲಿ 1,067 ಬಾಲಕರು, 1,050 ಬಾಲಕಿಯರು ಸೇರಿ ಒಟ್ಟು 2,117 ವಿದ್ಯಾರ್ಥಿಗಳು ಹಾಜರಾಗಿದ್ದು, 8 ವಿದ್ಯಾರ್ಥಿಗಳು ಗೈರಾಗಿದ್ದರು.
ಪರೀಕ್ಷಾ ಕೇಂದ್ರಗಳಿಗೆ ಕೆಲ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪಾಲಕರೊಂದಿಗೆ ಆಗಮಿಸಿದರೆ, ಬಹುತೇಕ ವಿದ್ಯಾರ್ಥಿಗಳು ಸಹಪಾಠಿಗಳೊಂದಿಗೆ ಗುಂಪಾಗಿ ಆಗಮಿಸಿದ್ದರು.ಈ ವೇಳೆ ಆಯಾ ಶಾಲೆಯ ಶಿಕ್ಷಕರು ಹಾಗೂ ಪಾಲಕರು ವಿದ್ಯಾರ್ಥಿಗಳಿಗೆ ಅಗತ್ಯ ಸಲಹೆ, ಸೂಚನೆಯನ್ನು ನೀಡಿದರು. ಪರೀಕ್ಷಾ ಕೇಂದ್ರಗಳಿಗೆ ಬಿಇಒ ಮಹೇಶ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಕೇಂದ್ರಗಳಿಗೆ ಅಗತ್ಯ ಸಿಬ್ಬಂದಿ ಹಾಗೂ ನರ್ಸ್‌ಗಳನ್ನು ನಿಯೋಜಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net