ರೈಲ್ವೇ ಬ್ಯಾರಿಕೇಡ್ ಅಳವಡಿಸಲು ಕ್ರಮ

ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಸಮೀಪ ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಎಸ್.ಪ್ರಭಾಕರನ್, ನಂಜುಂಡಪ್ರಸಾದ್, ಲೋಕೇಶ್, ಮಡಿವಾಳಪ್ಪ ಇದ್ದರು.
ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಸಮೀಪ ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಎಸ್.ಪ್ರಭಾಕರನ್, ನಂಜುಂಡಪ್ರಸಾದ್, ಲೋಕೇಶ್, ಮಡಿವಾಳಪ್ಪ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭರವಸೆ
ಗುಂಡ್ಲುಪೇಟೆ: ಕಾಡಾನೆಗಳು ಅರಣ್ಯದಿಂದ ಹೊರಬರುವ ಸ್ಥಳಗಳನ್ನು ಗುರುತಿಸಿ ರೈಲ್ವೇ ಬ್ಯಾರಿಕೇಡ್ ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ 6 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಓಂಕಾರ್ ವಲಯದ ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಜನತೆ ತೀವ್ರ ತೊಂದರೆ ಎದುರಿಸುವಂತಾಗಿದೆ. ಕಾಡುಪ್ರಾಣಿಗಳು ಹೆಚ್ಚಾಗಿ ಹೊರಬರುತ್ತಿರುವ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಸಫಾರಿಗೂ-ಕಾಡುಪ್ರಾಣಿಗಳು ಹೊರಬರುತ್ತಿರುವುದಕ್ಕೂ ಸಂಬಂಧವಿಲ್ಲ ಎಂಬುದು ಸಾಬೀತಾಗಿದೆ. ವನ್ಯಜೀವಿಗಳು ಕಾಡಿನಿಂದ ಹೊರಬಂದಾಗ ಅರಣ್ಯ ಇಲಾಖೆಯವರು ಅವುಗಳನ್ನು ಕಾಡಿಗಟ್ಟುವ ಮೂಲಕ ಸಂಘರ್ಷ ನಿಯಂತ್ರಿಸುತ್ತಿದ್ದಾರೆ. ಸರ್ಕಾರದಿಂದ ಅನುದಾನ ಬರುವುದು ಸ್ವಲ್ಪ ತಡವಾಗಿದ್ದರಿಂದ ಕಾಮಗಾರಿ ವಿಳಂಬವಾಗಿದೆ. ಈ ಸಂದರ್ಭದಲ್ಲಿ ಕಾಡಂಚಿನ ಜನರ ಸಹಕಾರ ತುಂಬಾ ಅಗತ್ಯ ಎಂದು ಹೇಳಿದರು.
ಬಂಡೀಪುರ ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕ ಎಸ್.ಪ್ರಭಾಕರನ್ ಮಾತನಾಡಿ, ಸರ್ಕಾರದ ಅನುದಾನದಲ್ಲಿ 4.67 ಕಿಮೀ ಕಾಮಗಾರಿ ಕೈಗೊಳ್ಳಲಾಗಿದ್ದು ಮುಂದಿನ 4 ಕಿಮೀ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಗುಂಡ್ಲುಪೇಟೆಯ ಭೀಮನಬೀಡು ಹಾಗೂ ಗೋಪಾಲಸ್ವಾಮಿಬೆಟ್ಟ ವಲಯದಲ್ಲಿಯೂ 5.33 ಕಿಮೀ ಬ್ಯಾರಿಕೇಡ್ ಅಳವಡಿಸಲಾಗುತ್ತಿದ್ದು ಹೆಚ್ಚಿನ ಸಂಘರ್ಷವಿರುವ ಪ್ರದೇಶಗಳು ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಮುಖಂಡ ಲೋಕೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಮಡಿವಾಳಪ್ಪ, ಮಾಜಿ ಅಧ್ಯಕ್ಷ ಆಲತ್ತೂರು ಜಯರಾಂ, ಓಂಕಾರ್ ವಲಯದ ಆರ್‌ಎಫ್‌ಒ ಹನುಮಂತಪ್ಪ ಪಾಟೀಲ್ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net