ಗ್ರಾಮಗಳಲ್ಲಿ ಡಿಎಸ್‌ಎಸ್ ಬಲಪಡಿಸಿರಿ

ಯಳಂದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ದಸಂಸ ಸಭೆಯಲ್ಲಿ ದೊಡ್ಡಿಂದುವಾಡಿ ಸಿದ್ದರಾಜು ಮಾತನಾಡಿದರು.
ಯಳಂದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ದಸಂಸ ಸಭೆಯಲ್ಲಿ ದೊಡ್ಡಿಂದುವಾಡಿ ಸಿದ್ದರಾಜು ಮಾತನಾಡಿದರು.
Published on
ಯಳಂದೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ದಲಿತ ಸಂಘರ್ಷ ಸಮಿತಿ ಸಂಘಟನೆಯನ್ನು ಬಲಪಡಿಸಬೇಕು ಎಂದು ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಸಲಹೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ಮತನಾಡಿದ ಅವರು, ಭಾರತಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ. ಸಂವಿಧಾನದಲ್ಲಿ ದಲಿತರ ಉದ್ಧಾರಕ್ಕಾಗಿ ಅನೇಕ ಸೌಲಭ್ಯಗಳನ್ನು ನೀಡಲಾಗಿದೆ. ನಾವು ಇಡೀ ರಾಷ್ಟ್ರದಲ್ಲಿ ದೊಡ್ಡ ಜನಸಂಖ್ಯೆಯಲ್ಲಿದ್ದೇವೆ. ಆದರೆ, ಇನ್ನೂ ನಮ್ಮ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಂಡಿಲ್ಲ. ಇದಕ್ಕೆ ಅರಿವಿನ ಕೊರತೆ ಹಾಗೂ ನಮ್ಮ ಹಕ್ಕುಗಳನ್ನು ಕೇಳುವ ಮನೋಭಾವ ಕಡಿಮೆ ಇರುವುದೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
ದಲಿತ ಸಂಘರ್ಷ ಸಮಿತಿಯನ್ನು ಸಂಘಟಿಸುವ ಕೆಲಸವನ್ನು ನಾವು ಮಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲೂ ನಮ್ಮ ಸಮಿತಿ ಸದಸ್ಯರನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ. ಇವರಿಗೆ ಅಗತ್ಯ ತರಬೇತಿ ನೀಡಬೇಕಿದೆ. ದಸಂಸದ ಉದ್ದೇಶವನ್ನು ತಿಳಿಸುವ ಕೆಲಸವನ್ನು ಮಾಡಬೇಕಿದೆ. ಇದರಿಂದ ಸಿಗುವ ಪ್ರಯೋಜನಗಳನ್ನು ಮನವರಿಕೆ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕೆಲಸವನ್ನು ಮಾಡಬೇಕು. ಗ್ರಾಮಗಳಲ್ಲಿ ಪ್ರತಿನಿತ್ಯ ನಡೆಯುವ ದೌರ್ಜನ್ಯ ಪ್ರಕರಣಗಳು, ಸ್ಮಶಾನ, ಕುಡಿಯುವ ನೀರು, ರಸ್ತೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ನಾವು ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಮಹದೇವ, ಮೀನಾಕ್ಷಮ್ಮ, ಶಿವಮ್ಮ, ಯರಿಯೂರು ಶಿವಣ್ಣ, ಶಂಕರಮೂರ್ತಿ, ರವಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net