ಅರಣ್ಯ, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ

ಹನೂರಿನ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಸಕ ಎಂ.ಆರ್. ಮಂಜುನಾಥ್, ವಿರಾಜ್ ಹೊಸೂರ್, ನಾಗರಾಜು, ಪ್ರಗಾಸನಾಥನ್ ಇತರರು ಇದ್ದರು.
ಹನೂರಿನ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಸಕ ಎಂ.ಆರ್. ಮಂಜುನಾಥ್, ವಿರಾಜ್ ಹೊಸೂರ್, ನಾಗರಾಜು, ಪ್ರಗಾಸನಾಥನ್ ಇತರರು ಇದ್ದರು.
Published on

ಶಾಸಕ ಎಂ.ಆರ್.ಮಂಜುನಾಥ್ ಅಭಿಮತ

ಹನೂರು: ಅರಣ್ಯ ಹಾಗೂ ಪರಿಸರ ಸಂರಕ್ಷಣೆ ದೃಷ್ಟಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ. ಆದ್ದರಿಂದ ಈ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಸಲವಾಗಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣದ ಆರ್.ಎಸ್ ದೊಡ್ಡಿಯ ಬಳಿಯ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಶನಿವಾರ ಅರಣ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ಧ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರೆರೆದು ಮಾತನಾಡಿದರು.
ಅರಣ್ಯ ಹಾಗೂ ಪರಿಸರ ಮನುಕುಲದ ಸಂಪತ್ತು. ಹಾಗಾಗಿ ಇದರ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ. ಅರಣ್ಯ ಕ್ಷೀಣಿಸುವಿಕೆಯಿಂದ ಜಾಗತಿಕ ತಾಪಮಾನದಲ್ಲಿ ಉಂಟಾಗುವ ವೈಪರೀತ್ಯದಿಂದ ಮಳೆ ಕೊರತೆ, ತಾಪಮಾನ ಹೆಚ್ಚಳ ಸೇರಿದಂತೆ ಇನ್ನಿತರ ಕಾರಣದಿಂದ ಪರಿಸರ ಮೇಲೆ ದುಷ್ಪಾರಿಣಾಮ ಬೀರಲಿದೆ. ಇದರಿಂದ ಮನುಕುಲದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟು ಮಾಡಲಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ವಿದ್ಯಾರ್ಥಿ ದಿಸೆಯಿಂದಲೇ ಹೆಚ್ಚು ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಬಳಿಕ ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು. ಶಾಸಕರು ವಿದ್ಯಾರ್ಥಿಗಳಿಗೆ ಓದಿನ ಕಡೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದರು. ಇದಕ್ಕೂ ಮುನ್ನ ಶಾಸಕರು ಅರಣ್ಯ ಹಾಗೂ ವನ್ಯಜೀವಿಗಳ ಬಗ್ಗೆ ಮಾಹಿತಿ ಸಂಗ್ರಹಾಲಯದ ಕೊಠಡಿಗೆ ತೆರಳಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಎಸಿಎಫ್ ವಿರಾಜ್ ಹೊಸೂರ್, ಆರ್‌ಎಫ್‌ಒ ನಾಗರಾಜು, ಪ್ರಾಂಶುಪಾಲ ಪ್ರಗಾಸನಾಥನ್, ಶಾಲೆಯ ಶಿಕ್ಷಕರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net