ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವ ಅಭಿರುಚಿ ಬೆಳೆಸಿಕೊಳ್ಳಿ

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿಂದು ದೈಹಿಕ ಶಿಕ್ಷಣ ವಿಭಾಗದಿಂದ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾಕೂಟ ದಿನಾಚರಣೆ ಕಾರ್ಯಕ್ರಮವನ್ನು ಚೆಸ್ ಆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿಂದು ದೈಹಿಕ ಶಿಕ್ಷಣ ವಿಭಾಗದಿಂದ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾಕೂಟ ದಿನಾಚರಣೆ ಕಾರ್ಯಕ್ರಮವನ್ನು ಚೆಸ್ ಆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರೊ. ಬಿ.ಎಸ್. ಮಹದೇವಸ್ವಾಮಿ ಅಭಿಮತ
  • ಕಾಲೇಜಿನಲ್ಲಿ ಕಾರ್ಯಕ್ರಮ
ಚಾಮರಾಜನಗರ: ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವಿಕೆಯ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಿ.ಎಸ್. ಮಹದೇವಸ್ವಾಮಿ ಅವರು ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿಂದು ದೈಹಿಕ ಶಿಕ್ಷಣ ವಿಭಾಗದಿಂದ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾಕೂಟ ದಿನಾಚರಣೆ ಕಾರ್ಯಕ್ರಮವನ್ನು ಚೆಸ್ ಆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಅಭಿರುಚಿ ಹೊಂದಬೇಕು.. ರಾಷ್ಟ್ರಮಟ್ಟದ ಖೋ ಖೋ ಪಟು ಕರ್ನಾಟಕದ ಚೈತ್ರ ಸೇರಿದಂತೆ ಹಲವಾರು ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆಗಳು ವ್ಯಕ್ತಿತ್ವ, ಶಿಸ್ತು ಮತ್ತು ಏಕತೆಯನ್ನು ಬೆಳೆಸುತ್ತವೆ. ಕ್ರೀಡಾ ಕ್ಷೇತ್ರದಲ್ಲಿ ಭಾರತ ದೇಶ ಉತ್ತಮ ಸಾಧನೆ ಮಾಡಿದೆ. ರಾಷ್ಟ್ರೀಯ ಕ್ರೀಡೆ ಹಾಕಿ ಆಟಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪೆÇ.್ರ ಬಿ.ಎಸ್. ಮಹದೇವಸ್ವಾಮಿ ಅವರು ತಿಳಿಸಿದರು.
ಚಾಮರಾಜನಗರ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶಾಂತರಾಜು ಅವರು ಮಾತನಾಡಿ ಕ್ರೀಡಾಪಟುಗಳು ಕಠಿಣ ಹಾಗೂ ನಿರಂತರ ಅಭ್ಯಾಸಗಳಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಜಯ ಖಚಿತ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಸಹಕಾರ ಮನೋಭಾವನೆ, ಹೊಂದಾಣಿಕೆ ಬೆಳೆಯುವುದರಿಂದ ಕ್ರೀಡೆಯು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಮಾರ್ಗಸೂಚಿಯಾಗುತ್ತದೆ ಎಂದರು.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ವರಮಹಾಲಕ್ಷ್ಮಿ ಸಾಂಸ್ಕøತಿಕ ಕ್ರೀಡಾ ಸೇವಾ ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಯುಸಿ ಕ್ರೀಡಾ ಸಮಿತಿ ಸದಸ್ಯರಾದ ಜಿ. ಬಂಗಾರು ಅವರು ನಮ್ಮ ಸಂಸ್ಥೆಯಿಂದ ವಿದ್ಯಾರ್ಥಿನಿಯರು ಮುಖ್ಯವಾಹಿನಿಗೆ ಬರಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯಿಂದ ಮುಂದಿನ ದಿನಗಳಲ್ಲಿ ಕ್ರೀಡಾ ಸಾಮಗ್ರಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಧ್ಯಾಪಕರಾದ ಸಿ. ಶೈಲೇಶ್ ಕುಮಾರ್, ಪಿ. ರೂಪದೇವಿ, ಡಾ. ಆರ್. ಪ್ರಸಾದ್, ಎಂ.ಸಿ ಪರಮೇಶ್, ಐಕ್ಯೂಎಸಿ ಸಂಚಾಲಕರಾದ ಡಾ. ಲಿಖಿತ ಎಸ್ ಅನುರಾಧ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net