ಮಾದಪ್ಪನ ಸನ್ನಿಧಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಪೂಜೆ

ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ  ಸಮ್ಮುಖದಲ್ಲಿ ಸ್ವಾಮಿ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು.
ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಸ್ವಾಮಿ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ನಾಗರ ಕಿರೀಟಕ್ಕೆ ಅಭಿಷೇಕ
ಹನೂರು: ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರು ಸ್ವಾಮಿಗೆ ವಿವಿಧ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.
ಷಷ್ಠಿ ಹಿನ್ನೆಲೆ ದೇಗುಲವನ್ನು ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಬೆಳಗ್ಗೆ ಎಂದಿನಂತೆ ಸ್ವಾಮಿಗೆ ಪೂಜೆ ನೆರವೇರಿಸಲಾಗಿತ್ತು. ಬೇಡಗಂಪಣ ಸರದಿ ಅರ್ಚಕರು ಸಾಲೂರು ಶ್ರೀಗಳ ಸಮ್ಮುಖದಲ್ಲಿ ಸ್ವಾಮಿಗೆ ಹಾಲು, ಮೊಸರು, ಎಳನೀರು, ಪಂಚಾಮೃತ ಅಭಿಷೇಕ ನೆರವೇರಿಸಿದರು.
ನಾಗರ ಕಿರೀಟಕ್ಕೂ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಪುಷ್ಪಗಳಿಂದ ಸಿಂಗರಿಸಿ ಬಿಲ್ವಾರ್ಚನೆಯೊಂದಿಗೆ ಮಹಾಮಂಗಳಾರತಿ ಬೆಳಗಿಸುವುದರ ಮೂಲಕ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.
ಬಳಿಕ ಶ್ರೀಗಳು ಹಾಗೂ ಭಕ್ತರ ಸಮ್ಮುಖದಲ್ಲಿ ಸತ್ತಿಗೆ, ಸೂರಿಪಾನಿ ಹಾಗೂ ವಾದ್ಯಮೇಳದೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತ ಮೆರವಣಿಗೆ ನಡೆಸಲಾಯಿತು. ಭಕ್ತರು ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯ ಜಯಘೋಷವನ್ನು ಮೊಳಗಿಸಿ ಭಕ್ತಿ ಭಾವ ಮೆರೆದರು. ರಾತ್ರಿ 7ಗಂಟೆಯಲ್ಲಿ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಹೆಚ್ಚಿನ ಭಕ್ತರು ಪಾಲ್ಗೊಂಡಿದ್ದರು. ಹರಕೆ ಹೊತ್ತವರು ದಂಡಿನ ಕೋಲನ್ನು ಹೊತ್ತು ಸಾಗಿದರು.
ಗುಂಡೇಗಾಲ ಮಠದ ಶ್ರೀಮಲ್ಲಿಕಾರ್ಜುನ ಸ್ವಾಮೀಜಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net