ಯಶಸ್ಸಿಗೆ ನಿರಂತರ ಪರಿಶ್ರಮ ಅಗತ್ಯ

ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಭೇತಿ ಕಾರ್ಯಾಗಾರವನ್ನು ಡಾ.ಮದನಕುಮಾರ್ ಉದ್ಘಾಟಿಸಿದರು. ಡಾ.ತುಳಸೀರಾಂ, ಡಾ. ಜ್ಯೋತಿ, ಅಧ್ಯಾಪಕ ಕಾರ್ಯದರ್ಶಿ ಡಾ. ರಮೇಶ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಎಸ್. ಮಂಜು, ಪ್ರೇರಣಾ ಕೋಶದ ಸಂಚಾಲಕ ಮಂಜುನಾಥ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಸ್. ಎಸ್. ಲಕ್ಷ್ಮೀ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಂಶುಪಾಲ ಪ್ರೊ. ಎ.ಆರ್. ಮದನ್‌ಕುಮಾರ್ ಸಲಹೆ
  • ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ತರಬೇತಿ ಕಾರ್ಯಾಗಾರ
ಗುಂಡ್ಲುಪೇಟೆ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯಲು ನಿರಂತರ ಪರಿಶ್ರಮ ಮತ್ತು ಸೂಕ್ತ ಮಾರ್ಗದರ್ಶನ ಅಗತ್ಯವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಏ.ಆರ್. ಮದನ್‌ಕುಮಾರ್ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಅನಿವಾರ್ಯವಾಗಿದೆ. ಇವುಗಳಲ್ಲಿ ಯಶಸ್ಸು ಪಡೆಯಲು ನಿರಂತರ ಪರಿಶ್ರಮ ಮತ್ತು ಸೂಕ್ತ ಮಾರ್ಗದರ್ಶನ ಯುಕ್ತ ತರಬೇತಿ ಅವಶ್ಯಕ ಎಂದು ಹೇಳಿದರು.
ಸಂಚಾಲಕರಾದ ಡಾ.ಎಸ್. ತುಳಸಿರಾಮ್ ಮಾತನಾಡಿ, ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಗ್ರಾಮೀಣ ಪ್ರತಿಭೆ ಸುರೇಶ್ ಅವರು ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೂರ್ಯ ಅಕಾಡೆಮಿಯ ಮೂಲಕ ಗ್ರಾಮೀಣ ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಉಚಿತ ಕಾರ್ಯಾಗಾರವನ್ನು ಕಾಲೇಜಿನಲ್ಲಿ ಆಯೋಜಿಸಿರುವುದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿದೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಜ್ಯೋತಿ, ಅಧ್ಯಾಪಕ ಕಾರ್ಯದರ್ಶಿ ಡಾ. ರಮೇಶ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಎಸ್. ಮಂಜು, ಪ್ರೇರಣಾ ಕೋಶದ ಸಂಚಾಲಕ ಮಂಜುನಾಥ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಸ್. ಎಸ್. ಲಕ್ಷ್ಮೀ , ಸೂರ್ಯ ಅಕಾಡೆಮಿಯ ಮಂಜು, ರಾಜಗೋಪಾಲ್ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net