ಯರಿಯೂರಿನಲ್ಲಿ ಸಾರಿಗೆ ಬಸ್ ನಿಲ್ಲಿಸಲು ಕ್ರಮವಹಿಸಿ

 ಯಳಂದೂರು ತಾಲೂಕಿನ ಯರಿಯೂರು ಗ್ರಾಮಕ್ಕೆ ಸಾರಿಗೆ ಬಸ್ ಡಿಪೋ ವ್ಯವಸ್ಥಾಪಕ ಭೋಗನಾಯಕ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ಬಸ್ ನಿಲ್ಲುವುದನ್ನುಪರಿಶೀಲಿಸಿದರು. ಗ್ರಾಮದ ಮುಖಂಡ ಯರಿಯೂರು ಶ್ರೀನಿವಾಸ್ ಇದ್ದರು.
ಯಳಂದೂರು ತಾಲೂಕಿನ ಯರಿಯೂರು ಗ್ರಾಮಕ್ಕೆ ಸಾರಿಗೆ ಬಸ್ ಡಿಪೋ ವ್ಯವಸ್ಥಾಪಕ ಭೋಗನಾಯಕ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ಬಸ್ ನಿಲ್ಲುವುದನ್ನುಪರಿಶೀಲಿಸಿದರು. ಗ್ರಾಮದ ಮುಖಂಡ ಯರಿಯೂರು ಶ್ರೀನಿವಾಸ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಪೋ ಅಧಿಕಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಸೂಚನೆ
ಯಳಂದೂರು: ತಾಲೂಕಿನ ಯರಿಯೂರು ಗ್ರಾಮದಲ್ಲಿ ಸಾರಿಗೆ ಬಸ್ ನಿಲ್ಲಿಸುತ್ತಿಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿರುವ ವಿಷಯ ತಿಳಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು, ತಾವು ಇರುವ ಜಾಗದಿಂದಲೇ ಫೋನ್ ಮೂಲಕ ಸಾರಿಗೆ ಬಸ್ ಘಟಕದ ಅಧಿಕಾರಿಯೊಂದಿಗೆ ಮಾತನಾಡಿ ಬಸ್‌ಗಳು ನಿಲ್ಲುವಂತೆ ಕ್ರಮವಹಿಸಲು ಸೂಚಿಸಿದರು.
ಈ ಕುರಿತು ಗ್ರಾಮದ ಮುಖಂಡ ಯರಿಯೂರು ಶ್ರೀನಿವಾಸ್ ಮಾತನಾಡಿ, ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ಲಿಸುತ್ತಿರಲಿಲ್ಲ. ಹಾಗಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ, ಹಿರಿಯ ನಾಗರೀಕರಿಗೆ, ಆಸ್ಪತ್ರೆಗೆ ತೆರಳುವ ರೋಗಿಗಳಿಗೆ, ಕೂಲಿ ಕಾರ್ಮಿಕರಿಗೆ, ತೊಂದರೆಯಾಗುತ್ತಿತ್ತು. ಹಾಗಾಗಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದರು. ವಿಷಯ ತಿಳಿದಕೊಡಲೇ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಫೋನ್ ಮೂಲಕ ಸಾರಿಗೆ ಅಧಿಕಾರಿಗೆ ಸಮಸ್ಯೆ ಬಗೆ ಹರಿಸುವಂತೆ ತಿಳಿಸಿದ್ದಾರೆ ಎಂದು ಹೇಳಿದರು.
ಈ ಕುರಿತು ಕೊಳ್ಳೇಗಾಲ ಬಸ್ ಡಿಪೋ ವ್ಯವಸ್ಥಾಪಕ ಭೋಗನಾಯಕ ಖುದ್ದು ಸ್ಥಳಕ್ಕೆ ಭೇಟಿ ನೀಡಿ, ಬಸ್ ನಿಲ್ಲಿಸುತ್ತಿರುವುದನ್ನು ಪರಿಶೀಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net