ಸವಾಲು ಸ್ವೀಕರಿಸಿ ಉತ್ತಮ ಜೀವನ ರೂಪಿಸಿಕೊಳ್ಳಿ

ಹೂಗ್ಯಂನಲ್ಲಿ ಆಯೋಜಿಸಿದ್ದ ಭರವಸೆಯ ಬೆಳಕು ಸಮಾರೋಪ ಸಮಾರಂಭದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಶಾಸಕ ಎಂ.ಆರ್ ಮಂಜುನಾಥ್, ಮಹೇಶ್, ವೆಂಕಟೇಶ್, ಚಂದ್ರಶೇಖರ್, ಕೃಷ್ಣೇಗೌಡ ಇತರರಿದ್ದರು.
ಹೂಗ್ಯಂನಲ್ಲಿ ಆಯೋಜಿಸಿದ್ದ ಭರವಸೆಯ ಬೆಳಕು ಸಮಾರೋಪ ಸಮಾರಂಭದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಶಾಸಕ ಎಂ.ಆರ್ ಮಂಜುನಾಥ್, ಮಹೇಶ್, ವೆಂಕಟೇಶ್, ಚಂದ್ರಶೇಖರ್, ಕೃಷ್ಣೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ.ಆರ್. ಮಂಜುನಾಥ್ ಕಿವಿಮಾತು
  • ಭರವಸೆಯ ಬೆಳಕು ಕಾರ್ಯಕ್ರಮ
ಹನೂರು: ಪ್ರತಿಯೊಬ್ಬರೂ ಸಮಯ ವ್ಯರ್ಥ ಮಾಡದೆ ಓದಿಗೆ ಹೆಚ್ಚಿನ ಒತ್ತನ್ನು ನೀಡುವುದರ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಕಿವಿಮಾತು ಹೇಳಿದರು.
ತಾಲೂಕಿನ ಹೂಗ್ಯಂ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಸಂಬಂಧ ಆಯೋಜಿಸಿದ್ದ ಭರವಸೆಯ ಬೆಳಕು ವಿನೂತನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಅರಣ್ಯ ಪ್ರದೇಶದಿಂದ ಕೂಡಿರುವ ಹನೂರು ಭಾಗವು ಗಡಿ ತಾಲೂಕಾಗಿದೆ. ಇಲ್ಲಿ ಶೈಕ್ಷಣಿಕವಾಗಿಯೂ ಹಲವು ಸಮಸ್ಯೆಗಳಿದ್ದು, ಸವಾಲಿನ ನಡುವೆಯೂ ಶಿಕ್ಷಣ ಪಡೆಯುತ್ತಿರುವುದಕ್ಕೆ ಪ್ರಕೃತಿಯೇ ಸ್ಫೂರ್ತಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸವಾಲನ್ನು ಧೈರ್ಯದಿಂದ ಸ್ವೀಕರಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದುವುದರ ಮೂಲಕ ಪಾಲಕರು, ಶಿಕ್ಷಕರು ಹಾಗೂ ಹಿರಿಯರಿಂದ ಅಗತ್ಯ ಮಾರ್ಗದರ್ಶನವನ್ನು ಪಡೆದು ದೃಢ ನಿರ್ಧಾರವನ್ನು ಹೊಂದಿ ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ಭವಿಷ್ಯದಲ್ಲಿ ಮಕ್ಕಳು ಉತ್ತಮ ಜೀವನವನ್ನು ರೂಪಿಸಿಕೊಳ್ಳಲಿ ಎಂದು ಪಾಲಕರು ಹೊಂದಿರುವ ಆಶಯವನ್ನು ಈಡೇರಿಸುವುದರ ಮೂಲಕ ಅವರ ಮುಖದಲ್ಲಿ ನಗು ತರುವಂತಹ ಕೆಲಸವಾಗಬೇಕು. ಇದರಿಂದ ಶಿಕ್ಷಣಕ್ಕೆ ಕೊಡಿಸಿದಕ್ಕೆ ಪಾಲಕರಿಗೆ ಸಾರ್ಥಕತೆ ಎನಿಸುತ್ತದೆ. ಜತೆಗೆ ಶೈಕ್ಷಣಿಕ ವಲಯಕ್ಕೂ ಕೀರ್ತಿ ತರುತ್ತದೆ. ಈ ದೆಸೆಯಲ್ಲಿ ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿರುವುದು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೆಚ್ಚು ಅಂಕ ಗಳಿಸುವುದರ ಜತೆಗೆ ಶೈಕ್ಷಣಿಕ ವಲಯ ರಾಜ್ಯದಲ್ಲಿ ಹೆಸರು ಗಳಿಸುವಂತಾಗಬೇಕು ಎಂದು ತಿಳಿಸಿದರು.
ಇದೇ ವೇಳೆ ಅಂಗವಿಕಲ ಮಕ್ಕಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜಾವಲಿನ್ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಗಿರುವ ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅನುಷಾ ಹಾಗೂ ಹನೂರಿನ ಬಿಎಂಜಿ ಪ್ರೌಢಶಾಲೆಯ ನಾಗವೇಣಿ ಇವರನ್ನು ಸನ್ಮಾನಿಸಲಾಯಿತು.
ಸಾಹಿತಿ ಹನೂರು ಚೆನ್ನಪ್ಪ, ಬಿಇಒ ಮಹೇಶ್, ಬಿಆರ್‌ಸಿ ವೆಂಕಟೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರನಾಯ್ಕ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ಶಿಕ್ಷಣ ಸಂಯೋಜಕರಾದ ಅಶೋಕ್, ಚಿನ್ನಪ್ಪಯ್ಯ, ಮಹೇಶ್, ಚಾಮುಲ್ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net