ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಹಲವು ಬಾರಿ ಗ್ರಾಪಂ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮಕೈಗೊಂಡಿರಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು ಬುಧವಾರ ಗ್ರಾಪಂ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಎಂದು ಪಿಡಿಒ ಶಿವಣ್ಣ ಭರವಸೆ ನೀಡಿದ್ದರು.