ಗುಂಡ್ಲುಪೇಟೆ: ಸುಲ್ತಾನ್ ಭತ್ತೇರಿ ರಸ್ತೆಯ ತಾಲೂಕಿನ ಕಗ್ಗಳದಹುಂಡಿ ಸಮೀಪ ಕೇರಳದಿಂದ ವೇಗವಾಗಿ ಬರುತ್ತಿದ್ದ ಕಾರು ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಸೋಮವಾರ ಬೆಳಗ್ಗೆ ಕೇರಳದಿಂದ ಪಟ್ಟಣದತ್ತ ವೇಗವಾಗಿ ಬರುತ್ತಿದ್ದ ಕಾರು ಚನ್ನಮಲ್ಲೀಪುರದಿಂದ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಕೂಡಲೇ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.