ಜಿಲ್ಲೆಯಾದ್ಯಂತ ಶಿಕ್ಷಕರಿಂದ ಕಪ್ಪುಪಟ್ಟಿ ಧರಿಸಿ ಬೋಧನೆ

ಚಾಮರಾಜನಗರದ ಮಕ್ಕಮೊಹಲ್ಲಾದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರು ಕಪ್ಪುಪಟ್ಟಿ ಧರಿಸುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಚಾಮರಾಜನಗರದ ಮಕ್ಕಮೊಹಲ್ಲಾದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರು ಕಪ್ಪುಪಟ್ಟಿ ಧರಿಸುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • *ಟಿಇಟಿ ಕಡ್ಡಾಯ ಸಂಬಂಧ ಕಾನೂನು ತಿದ್ದುಪಡಿಗೆ ಆಗ್ರಹ
  • ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಿರುವ ಸುಪ್ರೀಂ ಕೋರ್ಟ್
ಚಾಮರಾಜನಗರ : ಸೇವಾ ನಿರತ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಿರುವ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಿಂದ ರಕ್ಷಿಸಲು ಸೂಕ್ತ ಕಾನೂನು ತಿದ್ದುಪಡಿ ಮಾಡುವಂತೆ ಆಗ್ರಹಿಸಿ ಜಿಲ್ಲಾದ್ಯಂತ ಸರ್ಕಾರಿ ಶಾಲೆಯ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಗುರುವಾರ ಬೋಧನೆ ಮಾಡಿದರು.
ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು ಹಾಗೂ ಹನೂರು ತಾಲೂಕಿನ ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಕಪ್ಪುಪಟ್ಟಿ ಧರಿಸುವ ಮೂಲಕ ರಾಷ್ಟ್ರಾದ್ಯಂತ ಶಿಕ್ಷಕರ ೆಡರೇಷನ್ ಕರೆನೀಡಿದ್ದ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ಆದೇಶವನ್ನು ನೀಡಿತ್ತು. ಇದರಿಂದ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಶಿಕ್ಷಕರು ಅಭದ್ರತೆ ಎದುರಿಸುವಂತಾಗಿತ್ತು. ಈ ಸಂಬಂಧ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ವಿಶೇಷ ಕಾಯಿದೆ ಜಾರಿಗೆ ತರುವಂತೆ ಶಿಕ್ಷಕರು ಪ್ರತಿಭಟನೆಯನ್ನು ನಡೆಸಿದ್ದರು. ಅದರಂತೆ ರಾಷ್ಟ್ರೀಯ ಶಿಕ್ಷಕರ ೆಡರೇಷನ್ ಜ.8 ರಂದು ರಾಷ್ಟ್ರದಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು.
ಸೇವಾ ನಿರತ ಶಿಕ್ಷಕರಿಗೆ ಟಿಇಟಿ ಪರೀಕ್ಷೆ ಕಡ್ಡಾಯ ಮಾಡಿರುವ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಿಂದ ರಕ್ಷಿಸಲು ಸೂಕ್ತ ಕಾನೂನು ತಿದ್ದುಪಡಿ ತರಬೇಕು. ಎನ್‌ಪಿಎಸ್, ಯುಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸಬೇಕು ಹಾಗೂ ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕ ಮಾಡುವುದನ್ನು ಬಿಟ್ಟು ಖಾಯಂ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟವನ್ನು ಹಮ್ಮಿಕೊಂಡಿದ್ದರು. ಜಿಲ್ಲೆಯಲ್ಲೂ ಹೋರಾಟ ಯಶಸ್ವಿಯಾಗಿ ನಡೆಯಿತು.
ರಾಷ್ಟ್ರೀಯ ಶಿಕ್ಷಕರ ೆಡರೇಷನ್ ರಾಷ್ಟ್ರದಾದ್ಯಂತ ಕರೆ ನೀಡಿದ್ದ ಹೋರಾಟಕ್ಕೆ ಬೆಂಬಲ ಸೂಚಿಸಿ ಜಿಲ್ಲೆಯಲ್ಲೂ ಸರ್ಕಾರಿ ಶಾಲಾ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಬೋಧನೆ ಮಾಡಿದ್ದೇವೆ. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವೂ ಇದಕ್ಕೆ ಬೆಂಬಲ ಸೂಚಿಸಿದೆ.
ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಚಾಮರಾಜನಗರ
ಜಿಲ್ಲೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರು ಮಕ್ಕಳ ಬೋಧನೆಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಹೋರಾಟದಿಂದ ಯಾವುದೇ ರೀತಿಯ ಸಮಸ್ಯೆಯಾಗಿಲ್ಲ.
ಚಂದ್ರಪಾಟೀಲ್, ಉಪನಿರ್ದೇಶಕ, ಶಾಲಾ ಶಿಕ್ಷಣ ಇಲಾಖೆ, ಚಾಮರಾಜನಗರ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net