ಮಕ್ಕಳ ಕಲಿಕಾ ಮಟ್ಟ ಹೆಚ್ಚಿಸಲು ಶಿಕ್ಷಕರ ಶ್ರಮ ಅಗತ್ಯ

ಲೊಕ್ಕನಹಳ್ಳಿ ಕೆಪಿಎಸ್ ಶಾಲೆಯಲ್ಲಿ ದಾನಿಗಳಿಂದ ನಿರ್ಮಿಸಿರುವ ಶಾಲಾ ಕೊಠಡಿಯನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ಮಹೇಶ್, ವೆಂಕಟೇಶ್, ಅಶೋಕ್, ಮಂಗಳಮ್ಮ, ಮಾದೇಶ್ ಇತರರಿದ್ದರು.
ಲೊಕ್ಕನಹಳ್ಳಿ ಕೆಪಿಎಸ್ ಶಾಲೆಯಲ್ಲಿ ದಾನಿಗಳಿಂದ ನಿರ್ಮಿಸಿರುವ ಶಾಲಾ ಕೊಠಡಿಯನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ಮಹೇಶ್, ವೆಂಕಟೇಶ್, ಅಶೋಕ್, ಮಂಗಳಮ್ಮ, ಮಾದೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಲೊಕ್ಕನಹಳ್ಳಿ ಶಾಲೆ ಕೊಠಡಿ ಉದ್ಘಾಟನೆ
  • ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯ
ಹನೂರು: ದಾನಿಗಳಿಂದ ನಿರ್ಮಿಸಿರುವ ಶಾಲಾ ಕೊಠಡಿ ಮಕ್ಕಳ ಶಿಕ್ಷಣಕ್ಕೆ ವರದಾನವಾಗಿದೆ. ಶಿಕ್ಷಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ತಾಲೂಕಿನ ಲೊಕ್ಕನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದಾನಿಗಳಿಂದ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ 4 ಶಾಲಾ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಲೊಕ್ಕನಹಳ್ಳಿ ಕೆಪಿಎಸ್ ಶಾಲೆಯಲ್ಲಿ ಶಿಕ್ಷಣಕ್ಕೆ ಪೂರಕವಾದ ವಾತಾವರಣವಿದ್ದು, ಇಲ್ಲಿನ ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಹಾಗಾಗಿ ಪ್ರತಿ ವರ್ಷ ಮಕ್ಕಳ ದಾಖಲಾತಿಯಲ್ಲಿ ಹೆಚ್ಚಳವಾಗುತ್ತಿದೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾ ಕೊಠಡಿ ಇರಲಿಲ್ಲ. ಈ ಬಗ್ಗೆ ಇಲ್ಲಿನ ಮುಖ್ಯ ಶಿಕ್ಷಕರು ಶಿಕ್ಷಣ ಇಲಾಖೆ ಹಾಗೂ ಓ ಸ್ಯಾಟ್ ಸಂಸ್ಥೆಗೆ ಮನವಿ ಸಲ್ಲಿಸಿದ್ದರು.
ಇದನ್ನು ಮನಗಂಡ ಸಂಸ್ಥೆಯು ದಾನಿಗಳ ನೆರವಿನಿಂದ ಲೊಕ್ಕನಹಳ್ಳಿ ಕೆಪಿಎಸ್ ಶಾಲೆಯಲ್ಲಿ 4 ಶಾಲಾ ಕೊಠಡಿಯನ್ನು ಸುಸಜ್ಜಿತವಾಗಿ ನಿರ್ಮಿಸಿರುವುದು ನಿಜಕ್ಕೂ ಮೆಚ್ಚುಗೆಯ ಸಂಗತಿ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಿದಂತಾಗಿದ್ದು, ಕಲಿಕೆಗೆ ವರದಾನವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಓದಿನ ಕಡೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ಶಿಕ್ಷಕರು ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಇನ್ನಷ್ಟು ಕಾಳಜಿ ವಹಿಸಬೇಕು. ಪಾಲಕರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡಬೇಕು ಎಂದು ತಿಳಿಸಿದರು.
ಬಳಿಕ ವಿದ್ಯಾರ್ಥಿಗಳು, ಪಾಲಕರು, ಗ್ರಾಮಸ್ಥರು ಹಾಗೂ ಶಿಕ್ಷಕರು ಜತೆಗೂಡಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.
ಬಿಇಒ ಮಹೇಶ್, ಬಿಆರ್‌ಸಿ ವೆಂಕಟೇಶ್, ಎಸ್‌ಡಿಎಂಸಿ ಅಧ್ಯಕ್ಷ ಮಾದೇಶ್, ಉಪಾಧ್ಯಕ್ಷೆ ಚಿತ್ರಾ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ನಂದಿನಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ಶಿಕ್ಷಣ ಸಂಯೋಜಕರಾದ ಅಶೋಕ್, ಚಿನ್ನಪ್ಪಯ್ಯ, ಸಿಆರ್‌ಪಿ ಅನ್ವರ್‌ಖಾನ್, ಮುಖ್ಯ ಶಿಕ್ಷಕ ಮಾದೇಶ್ ಹಾಗೂ ಇನ್ನಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net