ನೊಂದ ಮಹಿಳೆಗೆ ಸಿಗಲಿದೆ ನ್ಯಾಯ

 ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಲಿತ ಮಹಿಳೆಯನ್ನು ಹನೂರು ಶಾಸಕ ಎಂ. ಆರ್.ಮಂಜುನಾಥ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಲಿತ ಮಹಿಳೆಯನ್ನು ಹನೂರು ಶಾಸಕ ಎಂ. ಆರ್.ಮಂಜುನಾಥ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸವರ್ಣೀಯರಿಂದ ಹಲ್ಲೆಗೊಳಗಾಗಿ
  • ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಲಿತ ಮಹಿಳೆ
ಕೊಳ್ಳೇಗಾಲ: ಸವರ್ಣೀಯರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಲಿತ ಮಹಿಳೆಯನ್ನು ಬುಧವಾರ ಹನೂರು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹನೂರು ತಾಲೂಕಿನ ಜಿ.ಆರ್.ನಗರ ನಿವಾಸಿ ಕನ್ನಾಲ್ ಅವರನ್ನು ಸವರ್ಣೀಯರು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು. ಬಳಿಕ ಕನ್ನಾಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲ ಮಂಜುನಾಥ್ ಭೇಟಿ ಮಾಡಿ ಧೈರ್ಯ ತುಂಬಿ ಆರೋಗ್ಯ ವಿಚಾರಿಸಿದರಲ್ಲದೆ ಪ್ರಕರಣದ ಬಗ್ಗೆ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಶಾಸಕ ಎಂ.ಆರ್.ಮಂಜುನಾಥ್, ದಲಿತ ಮಹಿಳೆ ಕನ್ನಾಲ್ ಅವರ ಮೇಲೆ ಹಲ್ಲೆ ಮಾಡಿರುವುದು ನೋವಿನ ಸಂಗತಿ. ಆರೋಪಿಗಳು ಕ್ರೂರತೆ ಪ್ರದರ್ಶಿಸಿದ್ದು, ಇಂತಹ ಘಟನೆಗಳು ಮರುಕಳಿಸಬಾರದು. ತಪ್ಪನ್ನು ತಪ್ಪು ಎಂತಲೇ ಹೇಳಬೇಕು. ಈಗಾಗಲೇ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ನೊಂದ ಮಹಿಳೆಗೆ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತದೆ ಎಂದರು.
ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಸಿದ್ದರಾಜು, ಮುಖಂಡ ಮಜೇಶ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net