ವಿಜೃಂಭಣೆಯ ಗ್ರಾಮ ದೇವತೆಯರ ಹರಕೆ ಜಾತ್ರೆ

ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಗ್ರಾಮ ದೇವತೆಯರ ಹರಕೆ ಜಾತ್ರೆ ವಿಜೃಂಭಣೆಯಿಂದ ನಡೆಯಿತು.
ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಗ್ರಾಮ ದೇವತೆಯರ ಹರಕೆ ಜಾತ್ರೆ ವಿಜೃಂಭಣೆಯಿಂದ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ದೇವಾಲಯಗಳನ್ನು ಶುಚಿಗೊಳಿಸಿ ವಿದ್ಯುತ್ ದೀಪಗಳಿಂದ ಅಲಂಕಾರ
  • ಪ್ರಸಾದ ವಿನಿಯೋಗ
ಗುಂಡ್ಲುಪೇಟೆ: ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಗ್ರಾಮ ದೇವತೆಯರ ಹರಕೆ ಜಾತ್ರೆ ವಿಜೃಂಭಣೆಯಿಂದ ನಡೆಯಿತು.
ವರ್ಷಕ್ಕೊಮ್ಮೆ ನಡೆಯುವ ಹಬ್ಬವನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಈ ಹಿನ್ನೆಲೆಯಲ್ಲಿ ತಮ್ಮ ಮನೆಗಳು ಹಾಗೂ ದೇವಾಲಯಗಳನ್ನು ಶುಚಿಗೊಳಿಸಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಬೇರೆ ಊರುಗಳಲ್ಲಿರುವ ತಮ್ಮ ಬಂಧುಬಾಂಧವರನ್ನು ಕರೆದು ಸಂಭ್ರಮದಿಂದ ಹಬ್ಬ ಆಚರಿಸಿದರು.
ಗ್ರಾಮದ ಹೊರವಲಯದಲ್ಲಿರುವ ಮಾಲರಸಮ್ಮ, ಬೆಟ್ಟದ ಚಿಕ್ಕಮ್ಮ, ಓಲೆ ಮಸಣಮ್ಮ ಹಾಗೂ ಮೂಗ ಚಿಕ್ಕಮ್ಮ ದೇವಾಲಯಗಳಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ನೆರವೇರಿದವು. ಆಯಾ ದೇವಾಲಯಗಳ ಒಕ್ಕಲುತನದ ಭಕ್ತರು ಹೊಸ ಬಿದಿರಿನ ಬುಟ್ಟಿಗಳಲ್ಲಿ ಪೂಜೆ ಸಾಮಗ್ರಿಗಳನ್ನು ತುಂಬಿಕೊಂಡು ಮೆರವಣಿಗೆ ಮೂಲಕ ಊರ ಮಧ್ಯದಲ್ಲಿ ಸಮಾವೇಶಗೊಂಡರು. ನಂತರ ತಮ್ಮ ತಮ್ಮ ಒಕ್ಕಲಿನ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಎಲ್ಲರಿಗೂ ಪ್ರಸಾದ ವಿನಿಯೋಗ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net