ಸ್ವಚ್ಛ ಪರಿಸರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ

ಕೊಳ್ಳೇಗಾಲ ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ 2024-25ನೇ ಸಾಲಿನಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಸನ್ಮಾನಿಸಲಾಯಿತು. ರಾಜೇಂದ್ರ, ತೋಟೇಶ್, ರುದ್ರಮ್ಮ ಶರಣಯ್ಯ, ಗುರುಶಾಂತಪ್ಪ ಬೆಳ್ಳುಂಡಗಿ, ರೇಖಾ ಇತರರಿದ್ದರು.
ಕೊಳ್ಳೇಗಾಲ ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ 2024-25ನೇ ಸಾಲಿನಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಸನ್ಮಾನಿಸಲಾಯಿತು. ರಾಜೇಂದ್ರ, ತೋಟೇಶ್, ರುದ್ರಮ್ಮ ಶರಣಯ್ಯ, ಗುರುಶಾಂತಪ್ಪ ಬೆಳ್ಳುಂಡಗಿ, ರೇಖಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ
ಕೊಳ್ಳೇಗಾಲ: ನಗರ, ಪಟ್ಟಣವನ್ನು ಸ್ವಚ್ಛಗೊಳಿಸುವ ಮೂಲಕ ಕೊಳಕು ಮುಕ್ತ ಪರಿಸರ ನಿರ್ಮಾಣಕ್ಕೆ ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಅವರನ್ನು ನಾವೆಲ್ಲರೂ ತಾಯಿಯಂತೆ ಕಾಣಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಸಿಡಿಎಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಪೌರ ಕಾರ್ಮಿಕರು ನಮ್ಮಂತೆ ಮನುಷ್ಯರು, ನಾವೆಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲೂ ಬರಬೇಕು. ನಮ್ಮ ಸುತ್ತಮುತ್ತಲ ಪರಿಸರವನ್ನು ಪೌರ ಕಾರ್ಮಿಕರು ಸ್ವಚ್ಛವಾಗಿಡುತ್ತಾರೆ. ಸ್ವಚ್ಛ ನಗರಿ ಎಂದು ಮೈಸೂರಿಗೆ ಖ್ಯಾತಿ ಬರಲು ಪೌರ ಕಾರ್ಮಿಕರೇ ಕಾರಣವಾಗಿದ್ದಾರೆ. ನಮ್ಮ ತಾಯಿಯಂತೆ ಪೌರ ಕಾರ್ಮಿಕರನ್ನು ಕಾಣಬೇಕು. ಅವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಎಂದರು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಅವರ ತ್ಯಾಗ, ಶ್ರಮ ಅಪಾರವಾಗಿದೆ. ರಾಜ್ಯ ಸರ್ಕಾರ ಪೌರ ಕಾರ್ಮಿಕರಿಗೆ ಹಲವು ಸೌಲಭ್ಯ ಗಳನ್ನು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 12,692 ಪೌರಕಾರ್ಮಿಕರನ್ನು ಕಾಯಂ ಗೊಳಿಸಿದ್ದಾರೆ. ಪೌರ ಕಾರ್ಮಿಕರ ಪ್ರಯುಕ್ತ ಅವರಿಗೆ ಕೃತಜ್ಞತೆ ಸಲ್ಲಿಸುತೇನೆ ಎಂದರು.
ಈ ವೇಳೆ 2024-25ನೇ ಸಾಲಿನಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಪೌರಕಾರ್ಮಿಕರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.93 ರಷ್ಟು ಫಲಿತಾಂಶ ಪಡೆದ ಪೌರಕಾರ್ಮಿಕ ಶರವಣ್ಣ ಭಂಡಾರಿ ಅವರ ಪುತ್ರ ರೋಹಿತ್, ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಪೌರ ಕಾರ್ಮಿಕರಿಗೆ ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ನಗರಸಭೆ ಪೌರಾಯುಕ್ತ ರುದ್ರಮ್ಮ ಶರಣಯ್ಯ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ನಗರಸಭೆ ಮಾಜಿ ಅಧ್ಯಕ್ಷ ರೇಖಾ, ಮಾಜಿ ಸದಸ್ಯರಾದ ಶಾಂತರಾಜು, ಪ್ರಕಾಶ್, ಸುರೇಶ್, ರಾಘವೇಂದ್ರ, ಮಂಜುನಾಥ್, ರಾಮಕೃಷ್ಣ, ಸುಮಸುಬ್ಬಣ್ಣ, ಪೌರ ಕಾರ್ಮಿಕರ ಸಂಘದ ರಾಜಣ್ಣ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net