ನೆಲಕಚ್ಚಿದ ಸಾವಿರಾರು ಬಾಳೆ ಗಿಡ

ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ಗಾಳಿ-ಮಳೆಗೆ ನೆಲಕಚ್ಚಿದ ಬಾಳೆ ಗಿಡಗಳು.
ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ಗಾಳಿ-ಮಳೆಗೆ ನೆಲಕಚ್ಚಿದ ಬಾಳೆ ಗಿಡಗಳು.
Published on
ಗುಂಡ್ಲುಪೇಟೆ: ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಬಿದ್ದ ಗಾಳಿ ಸಹಿತ ಮಳೆಗೆ ಸಾವಿರಾರು ಬಾಳೆ ಗಿಡಗಳು ನೆಲಕಚ್ಚಿವೆ.
ಗ್ರಾಮದ ವಾಸುದೇವ, ದೇವಶೆಟ್ಟಿ, ಪರಶಿವಮೂರ್ತಿ, ಬಸವಣ್ಣ, ಕೆಂಪರಾಜು, ಸಿದ್ದಮಲ್ಲಪ್ಪ ಅವರ ಜಮೀನುಗಳಲ್ಲಿ ಬೆಳೆದಿದ್ದ ನೇಂದ್ರ ಮತ್ತು ಏಲಕ್ಕಿ ಬಾಳೆ ಸಂಪೂರ್ಣ ನೆಲಕಚ್ಚಿವೆ. ರೈತರು ಸಾಲಮಾಡಿ ಬೆಳೆದಿದ್ದ ಬೆಳೆ ಇದೀಗ ಹಾಳಾಗಿದ್ದು, ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net