ಗುಂಡ್ಲುಪೇಟೆ: ಪಟ್ಟಣದ ಪೊಲೀಸರು ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ ಮೂವರನ್ನು ಬಂಧಿಸಿ, ಪಣಕ್ಕಿಟ್ಟಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ..ಪಟ್ಟಣ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ನೇನೆಕಟ್ಟೆ ಹೊರವಲಯದಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದರು..ಈ ವೇಳೆ ಇರ್ಫಾನ್ ಖಾನ್ ಮತ್ತು ಇಬ್ಬರು ಸಂಗಡಿಗರನ್ನು ವಶಕ್ಕೆ ಪಡೆದು ಪಣಕ್ಕಿಟ್ಟಿದ್ದ, 31 ಸಾವಿರ ರೂ. ನಗದು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.