ಕುಂದುಕೊರತೆ ಸಭೆಯಲ್ಲಿ ಮೂರು ದೂರು ದಾಖಲು

ಯಳಂದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಕಚೇರಿಯ ಸಿಬ್ಬಂದಿ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು.
ಯಳಂದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಕಚೇರಿಯ ಸಿಬ್ಬಂದಿ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರವಾಸಿ ಮಂದಿರ
  • ಲೋಕಾಯುಕ್ತ ಇನ್‌ಸ್ಪೆಕ್ಟರ್ ಲೋಹಿತ್‌ಕುಮಾರ್
  • ಕುಂದುಕೊರತೆ, ದೂರು ಸ್ವೀಕಾರ ಕಾರ್ಯಕ್ರಮ
ಯಳಂದೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಲೋಹಿತ್‌ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ಕುಂದುಕೊರತೆ, ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಮೂರು ದೂರುಗಳು ದಾಖಲಾದವು.
ಕೊಳ್ಳೇಗಾಲ ನಗರಸಭೆಯಲ್ಲಿ ಖಾತೆ ನವೀಕರಣ ಮಾಡುತ್ತಿಲ್ಲ. ಬೇಕೆಂತಲೇ ವಿಳಂಬ ಮಾಡಲಾಗುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಕ್ರಮ ವಹಿಸುತ್ತಿಲ್ಲ ಎಂದು ವಿಜಯ್‌ಕುಮಾರ್ ದೂರು ನೀಡಿದರು. ಅಂಬಳೆ ಗ್ರಾಮ ಪಂಚಾಯಿತಿ ಪಿಡಿಒ ಜಾಗದ ವಿಚಾರಕ್ಕೆ ನಕಲಿ ದಾಖಲೆ ಸೃಷ್ಟಿಸಿದ್ದು, ಈ ಬಗ್ಗೆ ಕ್ರಮ ವಹಿಸಿ ಎಂದು ತಾಲೂಕು ಪಂಚಾಯಿತಿ ಇಒಗೆ ಹಲವು ಬಾರಿ ದೂರು ನೀಡಿದ್ದರೂ ಕ್ರಮ ವಹಿಸಿಲ್ಲ ಎಂದು ತಾಲೂಕಿನ ವೈ.ಕೆ.ಮೋಳೆ ಗ್ರಾಮದ ಶಿವಣ್ಣ ದೂರು ಸಲ್ಲಿಸಿದರು.
ಗಂಗ ಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಕೊರೆಯಿಸಿ ಹಲವು ತಿಂಗಳು ಕಳೆದಿದ್ದರೂ ಇದಕ್ಕೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಇದರಿಂದ ನೀರು ಹರಿಸಲಾಗಾಗದೆ ಫಸಲು ಒಣಗುತ್ತಿದೆ. ಈ ಬಗ್ಗೆ ಸೆಸ್ಕ್ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರೂ ಸಂಪರ್ಕ ಕೊಡಿಸಲು ಇಲ್ಲಸಲ್ಲದ ನೆಪವೊಡ್ಡುತ್ತಿದ್ದಾರೆ. ಕೂಡಲೇ ಇವರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ರಘು ದೂರು ನೀಡಿದರು.
ಲೋಕಾಯುಕ್ತ ಇಲಾಖೆಯ ಶಕುಂತಲಾ, ಗುರುಪ್ರಸಾದ್, ಪ್ರತಾಪ್, ಶಾಂತರಾಜು, ಸೆಸ್ಕ್ ಎಇಇ ಲಿಂಗರಾಜು, ಆರ್‌ಎಫ್‌ಒ ಸಂಪತ್‌ಕುಮಾರ್, ಕೃಷಿ ಇಲಾಖೆಯ ಅಮೃತೇಶ್ವರ್ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net