ಅಂಬೇಡ್ಕರ್ ಹಬ್ಬ ಆಚರಣೆ ಸಂಬಂಧ ಹನೂರಿನಲ್ಲಿ ದಲಿತ ಮುಖಂಡರ ಸಭೆ ಆಯೋಜಿಸಲಾಗಿತ್ತು. ಚಂದ್ರು, ಮಹೇಶ್, ಮಾದೇವ, ಮಲ್ಲಿಕಾರ್ಜುನ, ಬಸವರಾಜು ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಸವರಾಜು ಮಾಹಿತಿ
ಹನೂರು:ಪಟ್ಟಣದಲ್ಲಿ ಈ ಬಾರಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಮೂರು ದಿನಗಳ ಕಾಲ ಅಂಬೇಡ್ಕರ್ ಹಬ್ಬವಾಗಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ನಡೆದಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಸವರಾಜು ತಿಳಿಸಿದರು.
ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂಬೇಡ್ಕರ್ ಹಬ್ಬ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಸಂಬಂಧ ಶುಕ್ರವಾರ ಆಯೋಜಿಸಿದ್ದ ದಲಿತ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಪಟ್ಟಣದಲ್ಲಿ ಏ.12,13 ಹಾಗೂ 14 ರಂದು ಅಂಬೇಡ್ಕರ್ ಹಬ್ಬ ಆಚರಿಸಲಿದ್ದು, ಮೈಸೂರು ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಹಬ್ಬ ಆಚರಣೆಗೆ ನಟ ದುನಿಯಾ ವಿಜಯ್ ಚಾಲನೆ ನೀಡಲಿದ್ದಾರೆ. ಏ.12 ರಂದು ಉಚಿತ ಆರೋಗ್ಯ ತಪಾಸಣೆ, ಭೀಮ ಗೀತ ಗಾಯನ ಹಾಗೂ ಅಂಬೇಡ್ಕರ್ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. 13 ರಂದು ವಿವಿಧ ಕ್ರೀಡಾ ಸ್ಪರ್ಧೆ, ಪ್ರಬಂಧ, ಚಿತ್ರಕಲೆ ಹಾಗೂ ಗೌತಮ್ ಶಾಲೆಯ ವಿದ್ಯಾರ್ಥಿಗಳಿಂದ ಭಾರತ ಭಾಗ್ಯವಿಧಾತ ರೂಪಕ ಪ್ರದರ್ಶನವಿದೆ. 14 ರಂದು ರಂಗೋಲಿ ಸ್ಪರ್ಧೆ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಆದ್ದರಿಂದ ಹೆಚ್ಚಿನ ಜನರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಯಜಮಾನರಾದ ಚಂದ್ರು, ಮಹೇಶ್, ಮಾದೇವ, ಮುಖಂಡರಾದ ಮಲ್ಲಿಕಾರ್ಜುನ, ಸತೀಶ್, ರಮೇಶ್, ನಿಂಗರಾಜು, ನಾಗಬಸಪ್ಪ, ಕುಮಾರ್ ಇರರು ಇದ್ದರು.