ಬಿಳಿಗಿರಿರಂಗನ ಬೆಟ್ಟ, ಮಹದೇಶ್ವರ ಬೆಟ್ಟ ಸೇರಿದಂತೆ ಸುತ್ತಮುತ್ತಲಿರುವ ಧಾರ್ಮಿಕ ಕೇಂದ್ರಗಳಿಗೆ ಬೆಂಗಳೂರು, ಮೈಸೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ವಾಹನಗಳು, ಜನರು ಕೊಳ್ಳೇಗಾಲ ಪಟ್ಟಣ ಮೂಲಕವೇ ಹಾದು ಹೋಗಬೇಕಾಗಿದೆ. ಹಾಗಾಗಿ ಸಂಚಾರ ಸಿಕ್ಕು ಉಂಟಾಗುತ್ತದೆ. ತಾತ್ಕಾಲಿಕವಾಗಿ ಬೇರೆ ಬೇರೆ ಠಾಣೆಗಳಿಂದ ಆರು ಸಿಬ್ಬಂದಿ ನಿಯೋಜನೆ ಮಾಡಿಕೊಂಡಿದ್ದು, ಸಂಚಾರ ನಿಯಂತ್ರಣ ಕಾರ್ಯನಿರ್ವಹಿಸಲಿದ್ದಾರೆ ಎಂದರು.