ಈ ಸಂಬಂಧ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಮುರುಡೇಶ್ವರಸ್ವಾಮಿ ಅವರು ವಿಜಯವಾಣಿಯೊಂದಿಗೆ ಮಾತನಾಡಿ, ಶಾಮನೂರು ಶಿವಶಂಕರಪ್ಪ ಅವರು ಶಾಸಕ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದು, ಜನಮ್ಮನಣೆ ಗಳಿಸಿದ್ದರು. ಸಮುದಾಯಕ್ಕೆ ದಾರಿದೀಪವಾಗಿದ್ದರು. ಇವರ ಸೇವೆ ಇನ್ನು ಅಗತ್ಯವಾಗಿತ್ತು. ಆದರೆ ಇವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಮಹಾಸಭಾಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದರು.