ಬಸ್ ನಿಲ್ಲಿಸಲು ತ್ರಿಯಂಭಕಪುರ ಗ್ರಾಮಸ್ಥರ ಪಟ್ಟು

ಗುಂಡ್ಲುಪೇಟೆ ತಾಲೂಕಿನ ತ್ರಿಯಂಭಕಪುರ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗೇಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಗುಂಡ್ಲುಪೇಟೆ ತಾಲೂಕಿನ ತ್ರಿಯಂಭಕಪುರ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗೇಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
Published on
ಗುಂಡ್ಲುಪೇಟೆ: ಗ್ರಾಮದ ಗೇಟ್‌ನಲ್ಲಿ ಸಾರಿಗೆ ಬಸ್‌ಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ ತಾಲೂಕಿನ ತ್ರಿಯಂಭಕಪುರ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಕೆಲಕಾಲ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪಟ್ಟಣದಿಂದ ಜಿಲ್ಲಾ ಕೇಂದ್ರಕ್ಕೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ಗಳು ಗ್ರಾಮದ ಗೇಟ್‌ನಲ್ಲಿ ನಿಲ್ಲಿಸುತ್ತಿಲ್ಲ. ಇದರಿಂದ ಆಸ್ಪತ್ರೆಗಳಿಗೆ ಹೋಗುವ ರೋಗಿಗಳು, ಶಾಲಾ- ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಚಾಲಕರು ಬಸ್‌ಗಳನ್ನು ನಿಲ್ಲಿಸುತ್ತಿಲ್ಲ. ಆದ್ದರಿಂದ ಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಆಗಮಿಸಿ ಬಸ್‌ಗಳನ್ನು ನಿಲ್ಲಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿದರು. ತೆರಕಣಾಂಬಿ ಬಸ್ ನಿಲ್ದಾಣದ ಟ್ರಾಫಿಕ್ ಕಂಟ್ರೋಲರ್ ಎಸ್.ವಿಠಲ್ ಅಧಿಕಾರಿಗಳ ಸೂಚನೆ ಮೇರೆಗೆ ಸ್ಥಳಕ್ಕೆ ಆಗಮಿಸಿ ಎಕ್ಸ್‌ಪ್ರೆಸ್ ಬಸ್‌ಗಳನ್ನು ಹೊರತುಪಡಿಸಿ ಉಳಿದ ಬಸ್‌ಗಳನ್ನು ನಿಲ್ಲಿಸಲು ಕ್ರಮಕೈಗೊಳ್ಳುವ ಭರವಸೆ ನೀಡಿದ ನಂತರ ಸಂಚಾರ ತಡೆಯನ್ನು ತೆರವುಗೊಳಿಸಲಾಯಿತು.
ಗ್ರಾಮಸ್ಥರಾದ ಮದ್ದಾನಪ್ಪ, ಮಹದೇವಶೆಟ್ಟಿ, ಮಹೇಶ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net