ಗುಂಡ್ಲುಪೇಟೆ: ತಾಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಜ್ಯದಿಂದ ಕೇರಳವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರ ಭೀಮನಬೀಡು ಸಮೀಪ ಕೇರಳ ಮೂಲದವರಿದ್ದ ಕಾರು ಹಾಗೂ ಎದುರಿನಿಂದ ವೇಗವಾಗಿ ಬರುತ್ತಿದ್ದ ಬೆಂಗಳೂರು ಮೂಲದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ಕಾರುಗಳು ಜಖಂ ಆಗಿದ್ದು ಇವುಗಳಲ್ಲಿ ಪ್ರಯಾಣಿಸುತ್ತಿದ್ದ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.