ಎರಡು ಹನಿ ಜೀವ ರಕ್ಷಕ

ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ಜೆ. ಶಕೀಲ್ ಅಹಮ್ಮದ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ಜೆ. ಶಕೀಲ್ ಅಹಮ್ಮದ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿದರು.
Published on
ಯಳಂದೂರು: ಪಟ್ಟಣವೂ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಅಗರ-ಮಾಂಬಳ್ಳಿ, ಗೌಡಹಳ್ಳಿ. ಹೊನ್ನೂರು ಸಾರ್ವಜನಿಕ ಆಸ್ಪತ್ರೆ, ತಾಲೂಕಿನ ಅಂಗನವಾಡಿ ಕೇಂದ್ರಗಳು, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಲ್ಲಿ ಪಲ್ಸ್ ಪೊಲೀಯೋ ಲಸಿಕೆಯ ಬೂತ್‌ಗಳನ್ನು ಮಾಡಲಾಗಿತ್ತು. ಆರೋಗ್ಯ ಇಲಾಖೆಯ ದಾದಿಯರು, ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಈ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 5 ವರ್ಷದ ಮಕ್ಕಳಿಗೆ ಪೊಲೀಯೋ ಲಸಿಕೆಯನ್ನು ಹಾಕಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net