ಅಪಘಾತದಲ್ಲಿ ಇಬ್ಬರು ಸವಾರರಿಗೆ ಗಾಯ

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪ ಅಪಘಾತದಲ್ಲಿ ಗಾಯಗೊಂಡವರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪ ಅಪಘಾತದಲ್ಲಿ ಗಾಯಗೊಂಡವರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು.
Published on

ಹೆಲ್ಮೆಟ್ ಇಲ್ಲದ ವಾಹನ ಸವಾರರಿಗೆ ತಾಲೂಕಿನ ತ್ರಿಯಂಭಕಪುರ ಗೇಟ್ ಸಮೀಪ ದಂಡ ವಿಧಿಸುತ್ತಿದ್ದ ಪೊಲೀಸರನ್ನು ಕಂಡು ಏಕಾಏಕಿ ಬಲಕ್ಕೆ ತಿರುಗಿಸಿದ ಬೈಕ್ ಮತ್ತೊಂದು ಬೈಕಿಗೆ ಡಿಕ್ಕಿ ಹೊಡೆದಿದೆ.

ತಾಲೂಕಿನ ತೆರಕಣಾಂಬಿ ಪೊಲೀಸರು ಭಾನುವಾರ ತ್ರಿಯಂಭಕಪುರ ಗೇಟ್ ಸಮೀಪ ಭಾರತೀಯ ವಾಹನ ಕಾಯ್ದೆ ಉಲ್ಲಂಘಿಸಿ ಚಾಲನೆ ಮಾಡುವ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಇದನ್ನು ಕಂಡು ಏಕಾಏಕಿ ಬೈಕ್ ಅನ್ನು ಬಲಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಲಕ್ಕೂರಿನ ಚಿಕ್ಮಸ್ವಾಮಿ ಮತ್ತು ಮತ್ತೊಂದು ಬೈಕ್‌ನಲ್ಲಿ ತೆರಳುತ್ತಿದ್ದ ಕಿಲಗೆರೆ ಸದಾನಂದ ಅವರಿಗೆ ಪೆಟ್ಟುಬಿದ್ದಿದೆ.
ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಗಾಯಾಳುಗಳನ್ನು ತಮ್ಮ ಜೀಪ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರು. ಕಾಲಿಗೆ ಗಾಯವಾಗಿದ್ದ ಚಿಕ್ಕಸ್ವಾಮಿ ಅವರನ್ನು ಚಾಮರಾಜನಗರ ಆಸ್ಪತ್ರೆಗೆ ಹಾಗೂ ತಲೆಗೆ ಪೆಟ್ಟು ಬಿದ್ದ ಸದಾನಂದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net