ಉಪವಾಸ ಸತ್ಯಾಗ್ರಹದಲ್ಲಿ ಇಬ್ಬರು ಮಹಿಳೆಯರು ಅಸ್ವಸ್ಥ

ಮೆದಗನಾಣೆಯಲ್ಲಿ ಗಿರಿಜನರು ಕೈಗೊಂಡಿರುವ ಉಪವಾಸ ಸತ್ಯಾಗ್ರಹದಲ್ಲಿ ಅಸ್ವಸ್ಥಗೊಂಡ ಇಬ್ಬರು ಮಹಿಳೆಯರು ಅಗತ್ಯ ಚಿಕಿತ್ಸೆ ಪಡೆಯುತ್ತಿರುವುದು.
ಮೆದಗನಾಣೆಯಲ್ಲಿ ಗಿರಿಜನರು ಕೈಗೊಂಡಿರುವ ಉಪವಾಸ ಸತ್ಯಾಗ್ರಹದಲ್ಲಿ ಅಸ್ವಸ್ಥಗೊಂಡ ಇಬ್ಬರು ಮಹಿಳೆಯರು ಅಗತ್ಯ ಚಿಕಿತ್ಸೆ ಪಡೆಯುತ್ತಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಚಿಕಿತ್ಸೆ ಬಳಿಕ ಚೇತರಿಕೆ
  • ಭರವಸೆ ಬಳಿಕ ಪ್ರತಿಭಟನೆ ಅಂತ್ಯ
ಹನೂರು: ವಿದ್ಯುತ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಮೆದಗನಾಣೆ ಗಿರಿಜನರ ಹಾಡಿಯಲ್ಲಿ 6 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಬುಧವಾರ ಇಬ್ಬರು ಮಹಿಳೆಯರು ಅಸ್ವಸ್ಥಗೊಂಡರು.
ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಮೆದಗನಾಣೆ ಗಿರಿಜನರ ಹಾಡಿಗೆ ವಿದ್ಯುತ್ ಸೌಕರ್ಯ ಕಲ್ಪಿಸುವಂತೆ ಗಿರಿಜನರು ಜಿಲ್ಲಾ ಬುಡಕಟ್ಟು ಹಿತರಕ್ಷನಾ ಸಮಿತಿ ಜತೆಗೂಡಿ ಪ್ರತಿಭಟನೆ ನಡೆಸುತ್ತಿದ್ದು, ಏ.12 ರಂದು 80 ವರ್ಷದ ಗಿರಿಪಂದಪ್ಪ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಇದೀಗ 30 ವರ್ಷದ ಮಾದೇವಿ ಹಾಗೂ 34 ವರ್ಷದ ಶಿವಮ್ಮ ಅಸ್ವಸ್ಥಗೊಂಡರು. ಸ್ಥಳಕ್ಕಾಗಮಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಅಗತ್ಯ ಚಿಕಿತ್ಸೆ ನೀಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಆಗಮಿಸಿ ಸಮಸ್ಯೆ ಆಲಿಸಿದರು. ಗ್ರಾಪಂ ಕೇಂದ್ರ ಸ್ಥಾನದಲ್ಲಿರದ ಪಿಡಿಒಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ತಾಪಂ ಇಒ ಉಮೇಶ್ ಅವರಿಗೆ ಸೂಚಿಸಿದರು. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಬಗ್ಗೆ ಮಾಹಿತಿ ಪಡೆದಿದ್ದು, ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ. ಇನ್ನುಳಿದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net