ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯರಿಬ್ಬರಿಗೆ ಗಾಯ

ಸ್ಕೂಟಿಗೆ ಟಿಪ್ಪರ್ ಡಿಕ್ಕಿ
ಸ್ಕೂಟಿಗೆ ಟಿಪ್ಪರ್ ಡಿಕ್ಕಿ
Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಹೆದ್ದಾರಿ
  • ಟಿಪ್ಪರ್ ಡಿಕ್ಕಿ
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಪಟ್ಟಣದ ಮೈಸೂರು ರಸ್ತೆ ಬದಿಯಲ್ಲಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಮಡಹಳ್ಳಿ ಗ್ರಾಮದ ಸಮೀಪ ಕೋಳಿ ಫಾರಂ ನಡೆಸುತ್ತಿರುವ ಕೇರಳ ಮೂಲದ ಮಾಯಿ, ರತ್ನಮ್ಮ ಮತ್ತು ಮಹದೇವಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು.
ಟಿಪ್ಪರ್‌ನಲ್ಲಿ ನೀರಿನ ಬಾಟಲಿಗೆ ಮದ್ಯಬೆರೆಸಿಟ್ಟುಕೊಂಡು ಕುಡಿಯುತ್ತ ವಾಹನ ಚಾಲನೆ ಮಾಡಿ ಅಪಘಾತ ನಡೆಸಿದ ಮಂಡ್ಯ ಮೂಲದ ಅಶೋಕ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net