ಈ ಹಿಂದೆ ಜಿಲ್ಲಾಡಳಿತದಿಂದ ಚಾಮರಾಜನಗರ, ಗುಂಡ್ಲುಪೇಟೆ, ಹನೂರು, ಯಳಂದೂರು, ಕೊಳ್ಳೇಗಾಲ ತಾಲೂಕು ಕಚೇರಿಗಳು ಮತ್ತು ಜಿಲ್ಲಾಡಳಿತ ಭವನದಲ್ಲಿ ಹೊರಗುತ್ತಿಗೆ ಆಧಾರದ 6 ಡಿ ಗ್ರೂಪ್ ನೌಕರಿಗಳನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲು ನಿರ್ಧರಿಸಲಾಗಿತ್ತು. ಅಂದು ಜಿಲ್ಲಾಧಿಕಾರಿಯಾಗಿದ್ದ ಶಿಲ್ಪಾನಾಗ್ ಅವರು ಈ ಸಂಬಂಧ ಸಭೆ ನಡೆಸಿ ಕಾರ್ಯಾನುಷ್ಠಾನಕ್ಕೆ ಮುಂದಾಗಿದ್ದರು. 6 ಡಿ ಗ್ರೂಪ್ ಹುದ್ದೆಗಳಿಗೆ 20ಕ್ಕೂ ಹೆಚ್ಚು ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 6 ಲಿಂಗತ್ವ ಅಲ್ಪಸಂಖ್ಯಾತರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದಲ್ಲೇ ಕೆಲವು ಭಿನ್ನಾಭಿಪ್ರಾಯ ಉಂಟಾಗಿತ್ತು. ತನದ ನಂತರ ಉದ್ಯೋಗ ನೀಡುವ ವಿಚಾರ ತೆರೆಮರೆಗೆ ಸರಿಯಿತು.