ಪಾಳ್ಯ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ಪಾಳ್ಯ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ರವಿ, ಉಪಾದ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಪಾಳ್ಯ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ರವಿ, ಉಪಾದ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
Published on
ಕೊಳ್ಳೇಗಾಲ: ತಾಲೂಕಿನ ಪಾಳ್ಯ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆನೂತನ ಅಧ್ಯಕ್ಷರಾಗಿ ಬಿ.ರವಿ, ಉಪಾಧ್ಯಕ್ಷರಾಗಿ ನಂಜುಂಡಸ್ವಾಮಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಅಧ್ಯಕ್ಷ ಗಾದಿಗೆ ಅದ್ಯಕ್ಷ ಸ್ಥಾನಕ್ಕೆ ಬಿ.ರವಿ, ಉಪಾದ್ಯಕ್ಷ ಸ್ಥಾನಕ್ಕೆ ನಂಜುಂಡಸ್ವಾಮಿ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಎಸ್.ನಾಗೇಶ್ ಅವಿರೋಧ ಆಯ್ಕೆ ಘೋಷಿಸಿದರು.
ನೂತನ ಅಧ್ಯಕ್ಷ ಬಿ.ರವಿ ಮಾತನಾಡಿ, ಪ್ರಥಮ ಬಾರಿಗೆ ಪಾಳ್ಯ ಗ್ರಾಮದಲ್ಲಿ ಪ್ರಾಥಮಿಕ ಪತ್ತಿನ ಸಹಕಾರ ಸಂಘ ಚುಟುವಟಿಕೆಗಳು ಆರಂಭಗೊಂಡಿದ್ದು, ಸಂಘದಲ್ಲಿರುವ 827 ಷೇರುದಾರರು 11 ನಿರ್ದೇಶಕರನ್ನು ಆಯ್ಕೆ ಮಾಡಿದ್ದಾರೆ. ರೈತರಿಗೆ ಸಹಕಾರ ಕ್ಷೇತ್ರದಿಂದ ಬರುವ ಸೌಲಭ್ಯ, ಸವಲತ್ತುಗಳನ್ನು ಪ್ರಾಮಾಣಿಕವಾಗಿ ಕೊಡಿಸುವುದಾಗಿ ತಿಳಿಸಿದರು.
ಬಳಿಕ ಗ್ರಾಮದಲ್ಲಿ ಸಾರ್ವಜನಿಕರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಿರ್ದೇಶಕರಾದ ವಿ.ನಂಜುಂಡಸ್ವಾಮಿ, ರಾಜನಾಯಕ, ಕಪ್ಪಡಿಶೆಟ್ಟಿ, ಸೌಮ್ಯಾ, ಕೃಷ್ಣವೇಣಿ, ಜೆ.ಶಿವಕುಮಾರ್, ಎನ್. ನಂಜುಂಡಸ್ವಾಮಿ, ಎನ್.ರಘು, ಡಿ.ಶಿವಮಲ್ಲು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net