ಸತ್ತೇಗಾಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ಸತ್ತೇಗಾಲ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ರಾಜಗೋಪಾಲ್ ಹಾಗೂ ಉಪಾಧ್ಯಕ್ಷರಾಗಿ ದೊಡ್ಡಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.
ಸತ್ತೇಗಾಲ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ರಾಜಗೋಪಾಲ್ ಹಾಗೂ ಉಪಾಧ್ಯಕ್ಷರಾಗಿ ದೊಡ್ಡಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.
Published on
ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ರಾಜಗೋಪಾಲ್ ಹಾಗೂ ಉಪಾಧ್ಯಕ್ಷರಾಗಿ ದೊಡ್ಡಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.
ಮಂಗಳವಾರ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಮಂಗಳವಾರ ನಿಗದಿಗೊಂಡಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಒಂದೊಂದು ನಾಮಪತ್ರ ಸಲ್ಲಿಕೆಯಾಯಿತು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷೆ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದೆ ಎಂದು ಚುನಾವಣಾಧಿಕಾರಿ ಎಸ್.ನಾಗೇಶ್ ಅವರು ಘೋಷಣೆ ಮಾಡಿದರು.
ಬಳಿಕ ನೂತನ ಅಧ್ಯಕ್ಷ ರಾಜಗೋಪಾಲ್ ಮಾತನಾಡಿ, ಎಲ್ಲ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ. ರೈತರ ಪರವಾಗಿ ಕೆಲಸ ಮಾಡುತ್ತೇನೆ. ನಮ್ಮ ಸೊಸೈಟಿಯನ್ನು ಹಿಂದೆ ಇದ್ದಂತೆ ಚಾಮರಾಜನಗರ ಜಿಲ್ಲೆಯಲ್ಲೇ ಮೊದಲ ಸ್ಥಾನ ಮಾಡುವ ಗುರಿ ಹೊಂದಿದ್ದೇನೆ. ಇದಕ್ಕೆ ಎಲ್ಲ ನಿರ್ದೇಶಕರು ಹಾಗೂ ರೈತರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
ಚುನಾವಣೆಯಲ್ಲಿ ನಿರ್ದೇಶಕದರಾದ ಆರ್.ನವೀನ್‌ಕುಮಾರ್, ಮಲ್ಲಿಕಾರ್ಜುನಸ್ವಾಮಿ, ಎಂ.ಶಂಕರೇಗೌಡ, ಮಂಜುಳಾ, ಕಾಂತು, ಚೆಲುವ ನಾಯಕ, ಸೋಮಶೇಖರ್ ಹಾಗೂ ಬ್ಯಾಂಕ್ ಪ್ರತಿನಿಧಿಕುಮಾರ್ ಹಾಗೂ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾಂಬಿಕಾ ಹಾಜರಿದ್ದರು. ಉಳಿದ ಮೂವರು ಭಾಸ್ಕರ್, ಮಲ್ಲೇಶ್, ಶಾಂತರಾಜು ಗೈರಾಗಿದ್ದರು. ಬಳಿಕ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನಿರ್ದೇಶಕರು ಹಾಗೂ ಗ್ರಾಮಸ್ಥ ತಾಪಂ ಮಾಜಿ ಸದಸ್ಯ ಅರುಣ್‌ಕುಮಾರ್, ಗ್ರಾಪಂ ಮಾಜಿ ಸದಸ್ಯ ಮಲ್ಲೇಶ್, ಸತ್ತೇಗಾಲ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ನಂಜುಂಡ, ಅಗ್ರಹಾರದ ನಾಗೇಂದ್ರ, ಮಹದೇವಯ್ಯ ಇತರರು ಹಾರ ಹಾಕುವ ಮೂಲಕ ಸನ್ಮಾನಿಸಿದರು. ಪಟಾಕಿ ಸಿಡಿಸಿ ಗೆಲುವನ್ನು ಸಂಭ್ರಮಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net