ಈ ವೇಳೆ ಪ್ರತಿಭಟನಕಾರರು ಮಾತನಾಡಿ, ಈ ಭಾಗದಲ್ಲಿ ಕಳೆದ ಹಲವು ತಿಂಗಳಿನಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿವೆ. ರಾತ್ರಿ ವೇಳೆ ಜಮೀನಿಗೆ ಲಗ್ಗೆ ಇಡುವ ಕಾಡಾನೆಗಳನ್ನು ನಿದ್ರೆಗೆಟ್ಟು ಓಡಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ರೈತರು ತುಂಬಾ ಸಮಸ್ಯೆಯನ್ನು ಎದುರಿಸುವಂತಾಗಿದೆ. ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಈ ಬಗ್ಗೆ ಕ್ರಮವಾಗಬೇಕು. ಇನ್ನು ಈ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಇನ್ನು ಸಮರ್ಪಕ ಬಸ್ ಸೌಕರ್ಯವಿಲ್ಲದ ಪರಿಣಾಮ ವಿದ್ಯಾರ್ಥಿಗಳು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದರು.