ಜಿಲ್ಲಾಧಿಕಾರಿಗಳ ಬಳಿ ಲಭ್ಯವಿರುವ ಹಣವನ್ನು ತುರ್ತು ಅವಶ್ಯಕತೆಗಳಿಗೆ ಬಳಸಿ

ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಖಾತೆಯಲ್ಲಿ ಸಾಕಷ್ಟು ಹಣವಿದೆ. ಈ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಇತರೆ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ ಬಳಸಿ. ಅನುದಾನಕ್ಕಾಗಿ ಕಾಯುವ ನೆಪವೊಡ್ಡಿ ಪರಿಹಾರ ಕಾರ್ಯ ವಿಳಂಬ ಮಾಡಬೇಡಿ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಖಾತೆಯಲ್ಲಿ ಸಾಕಷ್ಟು ಹಣವಿದೆ. ಈ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಇತರೆ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ ಬಳಸಿ. ಅನುದಾನಕ್ಕಾಗಿ ಕಾಯುವ ನೆಪವೊಡ್ಡಿ ಪರಿಹಾರ ಕಾರ್ಯ ವಿಳಂಬ ಮಾಡಬೇಡಿ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಬಿ ಜಿ ರಾಮ್‌ ಜಿ ಯೋಜನೆಯಡಿ ಉದ್ಯೋಗ ನೀಡಿ
  • ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ
ಚಾಮರಾಜನಗರ: ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಖಾತೆಯಲ್ಲಿ ಸಾಕಷ್ಟು ಹಣವಿದೆ. ಈ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಇತರೆ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ ಬಳಸಿ. ಅನುದಾನಕ್ಕಾಗಿ ಕಾಯುವ ನೆಪವೊಡ್ಡಿ ಪರಿಹಾರ ಕಾರ್ಯ ವಿಳಂಬ ಮಾಡಬೇಡಿ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ ಗ್ರಾಮ - ನಗರ ಪ್ರದೇಶಗಳಲ್ಲಿ ಯಾರೊಬ್ಬರಿಗೂ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ನೀರಿನ ಕೊರತೆ ಹೆಚ್ಚಾಗುವ ಸಂದರ್ಭಗಳಲ್ಲಿ ಜನರು ನೀರನ್ನು ಶೇಖರಿಸಿಟ್ಟುಕೊಳ್ಳುತ್ತಾರೆ. ಇದರಿಂದ ಡೆಂಘಿ, ಚಿಕೂನ್‌ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡಬಹುದು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಜನರಿಗೆ ಸೂಕ್ತ ತಿಳುವಳಿಕೆ ನೀಡಿ. ನಿಯಮಿತವಾಗಿ ಟಾಸ್ಕ್‌ ಫೋರ್ಸ್‌, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ನಡೆಸಿ. ಸಾಮಾನ್ಯವಾಗಿ ಬರಗಾಲದ ವರ್ಷಗಳಲ್ಲಿ ಕಲುಷಿತ ನೀರು ಕುಡಿದು ಸಮಸ್ಯೆಗೆ ಸಿಲುಕಿಕೊಳ್ಳುವವರ ಪ್ರಮಾಣ ಹೆಚ್ಚಿರುತ್ತದೆ. ಈ ಕುರಿತು ನೀವುಗಳು ಹೆಚ್ಚಿನ ನಿಗಾವಹಿಸಿ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು. ನಿಮ್ಮ ವರದಿಗಳ ಪ್ರಕಾರ ಜಾನುವಾರುಗಳಿಗೆ ಮೇವಿನ ಸಂಗ್ರಹ ಕಡಿಮೆ ಇದೆ. ಇದನ್ನು ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳು ನಿಮ್ಮ ತಂಡದ ಮೂಲಕ ಪರಿಶೀಲನೆ ಮಾಡಿಸಿ ಖಚಿತ ಪಡಿಸಿಕೊಳ್ಳಿ.‌ ಅಧಿಕಾರಿಗಳು ಟೀಮ್ ಆಗಿ ಕೆಲಸ‌‌ ಮಾಡಬೇಕು ಎಂದು ಸೂಚನೆ ನೀಡಿದರು.
ಕೊಳವೆ ಬಾವಿ ಸೇರಿದಂತೆ ಯಾರ್ಯಾರಿಗೆ ನೀರಿನ ಮೂಲಗಳಿವೆಯೊ ಅವರು ಮೇವು ಬೆಳೆಯುವಂತೆ ಪ್ರೋತ್ಸಾಹ ನೀಡಿ. ಮೇವಿನ ಬೀಜಗಳ ಕಿಟ್‌ಗಳನ್ನು ನೀಡಿ ಎಂದರು.
ಯಾವ ಜನವಸತಿ ಪ್ರದೇಶಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಹಠಾತ್‌ ಆಗಿ ಮಳೆ ಆಗುವುದರಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಾಗ ನೀರಿನ ಸಂಗ್ರಹಣೆಗಳು ಹೆಚ್ಚು ಕಾಲ ಇರುವಂತಾದರೆ ಸಾಂಕ್ರಾಮಿಕ ಕಾಯಿಲೆಗಳು ತೀವ್ರಗೊಳ್ಳಬಹುದು. ಅದರ ಕುರಿತು ಮುನ್ನೆಚ್ಚರಿಕೆ ವಹಿಸಿ. ಎಂದರು.
ಒಟ್ಟಾರೆ ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು, ಮೇವು,ಅಗತ್ಯ ಲಸಿಕೆ ಇತ್ಯಾದಿಗಳ ಕುರಿತು ಗಮನ ಹರಿಸಿ. ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಬರದ ತೀವ್ರತೆಯಿಂದ ಕಾಡಿನಲ್ಲಿಯೂ ನೀರಿಗೆ ಹಾಹಾಕಾರ ಉಂಟಾಗಲಿದೆ.‌ ಕಾಡು ಪ್ರಾಣಿಗಳು ನೀರಿಗಾಗಿ, ಮೇವಿನ ಸಮಸ್ಯೆಯಿಂದ ಕಾಡಿನಿಂದ ಹೊರಬರುತ್ತವೆ.‌ ಇದರಿಂದ ಜನರಿಗೆ ಸಮಸ್ಯೆ ಉಂಟಾಗಲಿದೆ. ಈ ಸಮಸ್ಯೆಗೆ ಈಗಿನಿಂದಲೇ ಪರಿಹಾರ ಕಂಡುಕೊಳ್ಳಬೇಕು‌ ಎಂದು ಸೂಚನೆ ನೀಡಿದರು.
ಎಲ್ಲ‌ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೆಡಿಸಿನ್ ಸಂಗ್ರಹವಿರಬೇಕು.ಬಹಳ ಗಂಭೀರವಾದ ಯಾವತ್ತು ನೋಡದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಎಲ್‌ನೀನೋ ಪರಿಣಾಮದಿಂದ ಕೆಲ ದೇಶಗಳಲ್ಲಿ ತುರ್ತು ಘೋಷಣೆ ಮಾಡಲಾಗಿದೆ. ಎಲ್ಲ ಪಿಡಿಒ, ಆರ್‌ಐ, ತಹಶೀಲ್ದಾರರು ಜನರ ಬಳಿಗೆ ಹೋಗಿ ಸಮಸ್ಯೆಗಳನ್ನು ಆಲಿಸಬೇಕು. ಗ್ರಾಮ ಪಂಚಾಯಿತಿ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದ ಅಧಿಕಾರಿಗಳು ಒಟ್ಟಾಗಿ ಸಮನ್ವಯತೆಯಿಂದ ಜನರಿಗಾಗಿ ಕೆಲಸ‌ ಮಾಡಬೇಕು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಹೆಚ್ಚು ಗಂಭೀರವಾಗಿ ಕೆಲಸ‌ ಮಾಡಬೇಕು ಎಂದರು.
ಬಹುತೇಕ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರು ಮತ್ತು ನಾನು ಈಗಲೇ ಎಚ್ಚರಿಕೆ ನೀಡಿದ್ದೇವೆ. ನಿಮ್ಮ ಕಾರ್ಯಚಟುವಟಿಕೆಯ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಎಲ್ಲರೂ ಕೇಂದ್ರಸ್ಥಾನದಲ್ಲಿದ್ದು ಕೆಲಸ‌ ಮಾಡಬೇಕು. ಇದನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net