ಹೆದ್ದಾರಿ ಫುಟ್ಪಾತ್‌ನಲ್ಲಿ ವಾಹನ ನಿಲುಗಡೆ

ಕೊಳ್ಳೇಗಾಲ ಪಟ್ಟಣದೊಳಗೆ ಹಾದು ಹೋಗಿರುವ ಚತುಷ್ಪಥ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ಲಾರಿಗಳು ಪಾರ್ಕಿಂಗ್ ಮಾಡಿರುವುದರಿಂದ ಶಾಲಾ ಮಕ್ಕಳು ರಸ್ತೆಯಲ್ಲಿ ಸಂಚರಿಸುತ್ತಿರುವುದು.
ಕೊಳ್ಳೇಗಾಲ ಪಟ್ಟಣದೊಳಗೆ ಹಾದು ಹೋಗಿರುವ ಚತುಷ್ಪಥ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ಲಾರಿಗಳು ಪಾರ್ಕಿಂಗ್ ಮಾಡಿರುವುದರಿಂದ ಶಾಲಾ ಮಕ್ಕಳು ರಸ್ತೆಯಲ್ಲಿ ಸಂಚರಿಸುತ್ತಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳು, ಸಾರ್ವಜನಿಕರ ಸಂಚಾಕ್ಕೆ ತೊಂದರೆ
ಕೊಳ್ಳೇಗಾಲ: ಪಟ್ಟಣದೊಳಗೆ ಹಾದು ಹೋಗಿರುವ ಚತುಷ್ಪಥ ರಸ್ತೆ (ರಾಷ್ಟ್ರೀಯ ಹೆದ್ದಾರಿ 209) ುಟ್ಪಾತ್ ಮಾರ್ಗದಲ್ಲಿ ಸಾಲುಗಟ್ಟಿ ನಿಲ್ಲುವ ವಾಹನಗಳಿಂದ ಪಾದಚಾರಿಗಳು ರಸ್ತೆಯ ಮೇಲೆ ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ.
ಎಂಜಿಎಸ್‌ವಿ ಜೂನಿಯರ್ ಕಾಲೇಜು ಮುಂಭಾಗದಿಂದ ಬಿಎಸ್‌ಎನ್‌ಎಲ್ ಕಚೇರಿವರೆಗೆ (ಎರಡು ಪಥದ ರಸ್ತೆ ಬದಿಯಲ್ಲೂ) ಖಾಸಗಿ ಬಸ್‌ಗಳು, ಗೂಡ್ಸ್ ಲಾರಿಗಳು ುಟ್ಪಾತ್‌ನಲ್ಲಿ ನಿಲುಗಡೆ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮಕ್ಕಳು ರಸ್ತೆಯ ಮಧ್ಯದಲ್ಲೇ ನಡೆದು ಹೋಗುವ ಪರಿಸ್ಥಿತಿ ಇದೆ. ಈ ಗಂಭೀರ ಸಮಸ್ಯೆಯ ಬಗ್ಗೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸಂಚಾರ ಸುರಕ್ಷತೆ ಜವಾಬ್ದಾರಿ ಹೊತ್ತಿರುವ ಪೊಲೀಸ್ ಇಲಾಖೆ ಗಮನಹರಿಸದಿರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಹೆದ್ದಾರಿ ರಸ್ತೆಯ ಅಕ್ಕಪಕ್ಕದಲ್ಲಿಯೇ ಶಾಲೆ- ಕಾಲೇಜುಗಳಿದ್ದು, ಪ್ರತಿದಿನ ವಿದ್ಯಾರ್ಥಿಗಳು ರಸ್ತೆ ಮಧ್ಯೆ ಭಾಗದಲ್ಲಿ ಸಂಚರಿಸುತ್ತಿದ್ದಾರೆ. ಇನ್ನಾದರೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಪಾದಚಾರಿ ಸುರಕ್ಷತೆಗಾಗಿ ರಸ್ತೆ ಬದಿಯಲ್ಲಿ ದಿನವಿಡೀ ನಿಲ್ಲುವ ವಾಹನಗಳಿಗೆ ಕಡಿವಾಣ ಹಾಕಬೇಕಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net