ಸಂಕ್ರಾಂತಿಯಂದು ನಡೆಯುವ ಜಾತ್ರೆಗೆ ಸ್ಥಳೀಯರಲ್ಲದೆ ಹೊರಗಿನಿಂದಲೂ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಆಗುತ್ತಿದ್ದ ನೂಕುನುಗ್ಗಲು ತಪ್ಪಿಸಿ ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಆಯೋಜಿಸಿತ್ತು. ತೆರಕಣಾಂಬಿ ಮತ್ತು ಪಟ್ಟಣದಿಂದ ಬಸ್‌ಗಳನ್ನು ನಿಯೋಜಿಸಲಾಗಿತ್ತು. ಬೆಟ್ಟಕ್ಕೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಖಾಸಗಿ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಬೈಕ್, ಕಾರು, ಬಸ್ಸು ಸೇರಿದಂತೆ ಎಲ್ಲ ವಾಹನಗಳು ತೆರಕಣಾಂಬಿಯಿಂದ ಬೊಮ್ಮನಹಳ್ಳಿ ರಸ್ತೆಯಲ್ಲಿ ಸಾಗಿ ಬೆಟ್ಟದ ತಪ್ಪಲಿನಲ್ಲಿ ಪ್ರಯಾಣಿಕರನ್ನು ಇಳಿಸಿ ಕೊತ್ತಲವಾಡಿ ಮಾರ್ಗದಲ್ಲಿ ವಾಪಸಾಗುವಂತೆ ಏಕಮುಖ ಸಂಚಾರ ವ್ಯವಸ್ಥೆ ಮಾಡಿತ್ತು. ಬೆಟ್ಟಕ್ಕೆ ಹೋಗುವ ಭಕ್ತರ ಬೈಕ್ ಕಾರುಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.