ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ವಿರೂಪಾಕ್ಷ ಅವಿರೋಧವಾಗಿ ಆಯ್ಕೆಯಾದರು.
ಪಕ್ಷದ ಆಂತರಿಕ ಒಪ್ಪಂದದಂತೆ ಈ ಹಿಂದೆ ಅಧ್ಯಕ್ಷರಾಗಿದ್ದ ಆರ್.ಎಸ್.ನಾಗರಾಜು ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ವಿರೂಪಾಕ್ಷ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಸೀಲ್ದಾರ್ ಎಂ.ಎಸ್.ತನ್ಮಯಿ ಅವಿರೋಧ ಆಯ್ಕೆ ಘೋಷಿಸಿದರು.
ನೂತನ ಅಧ್ಯಕ್ಷರನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ನಿರ್ಗಮಿತ ಅಧ್ಯಕ್ಷ ಆರ್.ಎಸ್.ನಾಗರಾಜು, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಎಪಿಎಂಸಿ ನಿರ್ದೇಶಕರಾದ ಪಿ.ಮಹದೇವಪ್ಪ, ಸೋಮಹಳ್ಳಿ ಶಿವನಾಗಪ್ಪ, ಎಚ್.ಬಿ. ನಾಗರಾಜು, ಕಾರ್ಯದರ್ಶಿ ಶ್ರೀಧರ್ ಅಭಿನಂದಿಸಿದರು.