ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸ್ಪಂದಿಸಿ

ಕೊಳ್ಳೇಗಾಲದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಥಾ ಕಾರ್ಯಕ್ರಮಕ್ಕೆ ತಾಪಂ ಇಒ ಕುಮಾರ್ ಚಾಲನೆ ನೀಡಿದರು. ಬಿಇಒ ಎಂ. ಮಂಜುಳಾ, ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
ಕೊಳ್ಳೇಗಾಲದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಥಾ ಕಾರ್ಯಕ್ರಮಕ್ಕೆ ತಾಪಂ ಇಒ ಕುಮಾರ್ ಚಾಲನೆ ನೀಡಿದರು. ಬಿಇಒ ಎಂ. ಮಂಜುಳಾ, ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
Published on
ಕೊಳ್ಳೇಗಾಲ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಪ್ರತಿಯೊಬ್ಬರೂ ಸ್ಪಂದಿಸಬೇಕು ಎಂದು ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಕುಮಾರ್ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತಿ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಥಾಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಭಾರತದ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವುದು ಸಂವಿಧಾನಿಕ ಹಕ್ಕು. ಹಾಗಾಗಿ ಮತದಾರ ಪಟ್ಟಿ ಪರಿಷ್ಕರಣೆಗೆ ಜೂ.30 ರಿಂದ ಜು. 29ರ ವರೆಗೆ ಮನೆ ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳು ಎನ್ಯೂಮರೇಷನ್ ನಮೂನೆ ನೀಡಲಿದ್ದು, ಪ್ರತಿಯೊಬ್ಬರೂ ಸರಿಯಾದ ಮಾಹಿತಿ ನೀಡಬೇಕು ಎಂದು ಹೇಳಿದರು. ಮತದಾರರು ಆಕ್ಷೇಪಣೆ ಸಲ್ಲಿಸಲು ಆ.5ರಿಂದ ಸೆ.4 ರವರೆಗೆ ಅವಕಾಶವಿದೆ. ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಜಾಗೃತಿ : ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಾಥಾ ಆರಂಭಗೊಂಡ ಬಳಿಕ ಡಾ. ರಾಜ್‌ಕುಮಾರ್ ರಸ್ತೆ, ಡಾ.ವಿಷ್ಣುವರ್ಧನ್ ರಸ್ತೆ, ಬಸ್ ನಿಲ್ದಾಣ, ಎಂಜಿಎಸ್‌ವಿ ಕಾಲೇಜು ರಸ್ತೆ ಮೂಲಕ ತಾಲೂಕು ಪಂಚಾಯತಿ ಆವರಣದವರೆಗೆ ಸಾಗಿಬಂತು. ಈ ಸಂದರ್ಭ ಅಧಿಕಾರಿಗಳು ಹಾಗು ಸಿಬ್ಬಂದಿ ಜಾಗೃತಿ ಮೂಡಿಸಿದರು.
ತಾಪಂ ಸಹಾಯಕ ನಿರ್ದೇಶಕ ಸಂದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಮಂಜುಳಾ, ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ತೋಟಗಾರಿಕೆ, ಶಿಕ್ಷಣ ಇಲಾಖೆ, ತಾಪಂ ಮತ್ತು ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net