ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಅಸ ಮತದಾನ

ಮಂಗಲದಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಐಆರ್ ಸಂಬಂಧ ಜಾಗೃತಿ ಜಾಥಾ ನಡೆಸಿದರು.
ಮಂಗಲದಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಐಆರ್ ಸಂಬಂಧ ಜಾಗೃತಿ ಜಾಥಾ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯ ಶಿಕ್ಷಕ ಮಹೇಶ್ ಅಭಿಮತ
  • ಮಂಗಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ
ಹನೂರು: ತಾಲೂಕಿನ ಮಂಗಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಜತೆಗೂಡಿ ಶನಿವಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಮುಖ್ಯಶಿಕ್ಷಕ ಮಹೇಶ್ ಮಾತನಾಡಿ, ಮತದಾನ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಅಸ್ತ್ರ. ಪ್ರತಿ ಪ್ರಜೆಯ ಹಕ್ಕಾಗಿದೆ. ಮತದಾರರ ಪಟ್ಟಿ ದೋಷ ರಹಿತದಿಂದ ಕೂಡಿರಬೇಕು. ಇದು ಯಶಸ್ವಿ ಚುನಾವಣೆಗೆ ಸಹಕಾರಿಯಾಗಿದೆ ಎಂದರು.
ಬಿಎಲ್‌ಒಗಳು ಮನೆ ಮನೆಗೆ ತೆರಳಿ ಗಣತಿ ನಮೂನೆಯನ್ನು ನೀಡುತ್ತಿದ್ದು, ಕಾರ್ಯ ಮುಂದುವರಿದಿದೆ. ಆದ್ದರಿಂದ ಆರ್ಹ ಪ್ರತಿಯೊಬ್ಬರೂ ಗಣತಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ನೀಡಬೇಕು. ಇಲ್ಲವಾದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಇಲ್ಲವಾಗಿ ಮತದಾನದ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಶಿಕ್ಷಕರಾದ ಶಂಭಯ್ಯ, ಮಹದೇವಸ್ವಾಮಿ, ಸೂರ್ಯಕಾಂತ್, ಸತೀಶ್, ವೆಂಕಟೇಶ್, ಪುಟ್ಟಸ್ವಾಮಿ ಹಾಗೂ ಅಂಜಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net