ಗ್ರಾಮದ ದಾಸನಾಯ್ಕ ಎಂಬುವರು 2 ಎಕರೆ ಜಮೀನಿನಲ್ಲಿ ಮುಸುಕಿನ ಜೋಳದ ಫಸಲನ್ನು ಬೆಳೆದಿದ್ದರು. ಆದರೆ ರಾತ್ರಿ ಸಮೀಪದ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಗಳು ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ತಿಂದು ತುಳಿದು ನಾಶಪಡಿಸಿದೆ. ಇದರಿಂದ ನಷ್ಟವಾಗಿದೆ. ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವುದರ ಮೂಲಕ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು. ಜತೆಗೆ ಕಾಡಾನೆಗಳು ಜಮೀನಿಗೆ ಲಗ್ಗೆ ಇಡದಂತೆ ಕಡಿವಾಣ ಹಾಕುವಂತೆ ರೈತ ದಾಸನಾಯ್ಕ ಒತ್ತಾಯಿಸಿದ್ದಾರೆ.