ಹನೂರು ಪಟ್ಟಣ ಅಭಿವೃದ್ಧಿಗೆ ಶ್ರಮಿಸಿ

ಹನೂರು ಪಟ್ಟಣ ಪಂಚಾಯಿತಿಯಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಆಯೋಜಿಸಲಾಗಿತ್ತು. ವೆಂಕಟೇಶ್, ಕೆ.ಎನ್ ಚೈತ್ರಾ, ರೇಖಾ ಇತರರಿದ್ದರು.
ಹನೂರು ಪಟ್ಟಣ ಪಂಚಾಯಿತಿಯಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಆಯೋಜಿಸಲಾಗಿತ್ತು. ವೆಂಕಟೇಶ್, ಕೆ.ಎನ್ ಚೈತ್ರಾ, ರೇಖಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಸೂಚನೆ
ಹನೂರು: ಪ್ರತಿಯೊಬ್ಬರೂ ದಕ್ಷತೆಯಿಂದ ಕಾರ್ಯನಿರ್ವಹಿಸುವ ಮೂಲಕ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿಛ್ಛ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು. ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿ ಇಚ್ಛಾಶಕ್ತಿ ಕೊರತೆಯಿಂದ ಸಮರ್ಪಕವಾಗಿ ಕೆಲಸಗಳಾಗುತ್ತಿಲ್ಲ. ಈ ಬಗ್ಗೆ ಜನರಿಂದ ವ್ಯಾಪಕ ದೂರು ಕೇಳಿ ಬಂದಿದೆ. ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಕುಡಿವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳ ಕೊರತೆ ಇದೆ. ಇತ್ತ ಕಂದಾಯ ಹಾಗೂ ಬಾಡಿಗೆ ವಸೂಲಾತಿ ಆಗುತ್ತಿಲ್ಲ. ಇ ಸ್ವತ್ತು ನೀಡಿಕೆಯಲ್ಲಿ ವಿಳಂಬದ ಜತೆಗೆ ಅಕ್ರಮ ಆರೋಪ ಕೇಳಿಬಂದಿದೆ. ಇದರಿಂದ ಪಟ್ಟಣದ ಅಭಿವೃದ್ಧಿಗೆ ತೊಡುಕಾಗಿ ಪರಿಣಮಿಸಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಯಾವುದೇ ಲೋಪವಿಲ್ಲದೇ ಕಾರ್ಯನಿರ್ವಹಿಸಬೇಕಿದೆ. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಇಲ್ಲವಾದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇನ್ನು ಪಟ್ಟಣವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾದ ಕೆಲಸವಾಗಬೇಕಿದ್ದು, ಈ ಬಗ್ಗೆ ಜನರು ನಿರೀಕ್ಷೆಯಲ್ಲಿದ್ದಾರೆ. ಇದರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆಯನ್ನು ತಯಾರಿಸಿ ನಿಯಾಮಾನುಸಾರ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಸರಿಯಾಗಿ ಕೆಲಸ ನಿರ್ವಹಿಸದ ಕೆಲ ಸಿಬ್ಬಂದಿಯನ್ನು ಶಾಸಕರು ತರಾಟೆಗೆ ತೆಗೆದುಕೊಂಡು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಮೂಲಕ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು. ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.
ಜಿಲ್ಲಾ ಯೋಜನಾ ನಿರ್ದೇಶಕ ವೆಂಕಟೇಶ್, ತಹಸೀಲ್ದಾರ್ ಕೆ.ಎನ್ ಚೈತ್ರಾ, ಪಪಂ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜು, ಆರೋಗ್ಯಾಧಿಕಾರಿ ಪ್ರಕಾಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net