ಗ್ರಾಮದ ಆರ‌್ಮುಗಂ ಎಂಬುವವರ ಪುತ್ರ ಪೆರಿಯಸ್ವಾಮಿ (37) ಮೃತ. ಜೂ.6 ರಂದು ಗ್ರಾಮದ ಕುಮಾರ್ ಎಂಬುವರ ಜಮೀನಿನಲ್ಲಿ ತೆಂಗಿನ ಕಾಯಿ ಕೀಳಲು ಮರವನ್ನು ಹತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು. ಕುಟುಂಬಸ್ಥರು ಕೌದಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.