ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿದವನಿಗೆ ಥಳಿತ

ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ವ್ಯಕ್ತಿಯನ್ನು ಗ್ರಾಮಸ್ಥರು ಸೆರೆಹಿಡಿದು ಕಂಬಕ್ಕೆ ಕಟ್ಟಿ ಹಾಕಿರುವುದು.
ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ವ್ಯಕ್ತಿಯನ್ನು ಗ್ರಾಮಸ್ಥರು ಸೆರೆಹಿಡಿದು ಕಂಬಕ್ಕೆ ಕಟ್ಟಿ ಹಾಕಿರುವುದು.
Published on
ಯಳಂದೂರು: ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿದ ಯುವಕನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದ ನಿವಾಸಿ ಚಂದ್ರು (19) ಎಂಬಾತ ಕೃತ್ಯವ್ಯಸಗಿ ಥಳಿತಕ್ಕೊಳಗಾಗಿದ್ದಾನೆ
ಗ್ರಾಮದ ಪ್ರಮುಖ ರಸ್ತೆ ಬದಿಯಲ್ಲಿ ಅಳವಡಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕ್ಕೆ ಆರೋಪಿ ಭಾನುವಾರ ಬೆಳಗಿನ ಜಾವ ಸಗಣಿ ಬಳಿದು, ಫಲಕಕ್ಕೆ ಹಾಕಿದ್ದ ವಿದ್ಯುತ್ ದೀಪಗಳನ್ನು ಒಡೆದು ಹಾಕಿದ್ದ. ಜತೆಗೆ ಮತ್ತೊಂದು ಭಾವಚಿತ್ರ ಇರುವ ಫಲಕಕ್ಕೆ ಸಗಣಿ ಬಳಿಯುತ್ತಿದ್ದಾಗ ನಿವಾಸಿಯೊಬ್ಬರು ನೋಡಿ ತಕ್ಷಣ ಗ್ರಾಮದವರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಜಮಾಯಿಸಿದ ಜನರು ಭಾವಚಿತ್ರಕ್ಕೆ ಅಪಮಾನ ಮಾಡಿದ ಯುವಕ ಚಂದ್ರುವನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ನಂತರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಭಾವಚಿತ್ರಗಳಿಗೆ ಈ ರೀತಿಯ ಅಪಮಾನ ಜಿಲ್ಲೆಯಲ್ಲಿ ಆಗಾಗ್ಗೆ ನಡೆಯುತ್ತಿರುವುದು ಬೇಸರದ ಸಂಗತಿ, ಕೃತ್ಯವೆಸಗಿರುವ ಯುವಕನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಹಾಗೂ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ, ಕೃತ್ಯ ವೆಸಗಿದ ಯುವಕನನ್ನು ಠಾಣೆಗೆ ಕರೆದೊಯ್ದರು. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ: ಮಸಣಾಪುರ ಗ್ರಾಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು, ಜಿಲ್ಲೆಯಿಂದ ಗಡಿಪಾರು ಮಾಡುವ ನಿಟ್ಟಿನಲ್ಲಿ ಪೊಲೀಸರು ಕ್ರಮವಹಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net