ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಾನಿಕ್ಸ್ ವಸ್ತುಗಳು ಹಾನಿ

ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಹೋಗಿರುವುದು.
ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಹೋಗಿರುವುದು.
Published on
ಯಳಂದೂರು: ತಾಲೂಕಿನ ಗಣಿಗನೂರು ಗ್ರಾಮದ ನಾಯಕರ ಬೀದಿಯಲ್ಲಿ ಶನಿವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಲವು ಮನೆಗಳ ಟಿವಿ, ಮಿಕ್ಸರ್ ಗ್ರೈಂಡರ್, ಫ್ರಿಡ್ಜ್, ವಾಷಿಂಗ್ ಮಷಿನ್, ವಿದ್ಯುತ್ ಬಲ್ಬ್‌ಗಳು ಸೇರಿದಂತೆ ಹಲವು ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಹೋಗಿವೆ.
ವಿದ್ಯುತ್ ತಂತಿಗಳನ್ನು ಬದಲಿಸಿ ಇನ್ಸುಲೇಟೆಡ್ ಕೇಬಲ್‌ಗಳನ್ನು ಹಾಕುವ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ರಾತ್ರಿ ವೇಳೆಗೆ ಮತ್ತೆ ವಿದ್ಯುತ್ ಸಂಪರ್ಕ ನೀಡಿದ ಸಂದರ್ಭದಲ್ಲಿ ಏಕಾಏಕಿ ಹೆಚ್ಚಿನ ಪ್ರಮಾಣದ ವಿದ್ಯುತ್ ಪ್ರವಹಿಸಿದೆ. ಇದರಿಂದ 10ಕ್ಕೂ ಹೆಚ್ಚು ಮನೆಗಳ ವಿದ್ಯುತ್ ಪರಿಕರಗಳು ಸುಟ್ಟಿವೆ. ಅಲ್ಲದೆ ಬೀದಿ ದೀಪಗಳೂ ಸುಟ್ಟಿದ್ದು ಲಕ್ಷಾಂತರ ರೂ. ನಷ್ಟವಾಗಿದೆ.
ಇದಕ್ಕೆ ಸೆಸ್ಕ್ ಅಧಿಕಾರಿಗಳು, ನೌಕರರ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರನೇ ನೇರ ಹೊಣೆಯಾಗಿದ್ದಾರೆ. ತಕ್ಷಣ ವಿದ್ಯುತ್ ನಿಲುಗಡೆಯಾಗಿದ್ದರಿಂದ ಇನ್ನಷ್ಟು ಅಪಾಯ ತಪ್ಪಿದೆ. ಸಂಬಂಧಪಟ್ಟವರು ಸೂಕ್ತ ಪರಿಹಾರ ನೀಡಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಭೇಟಿ ನೀಡಿ ಸೂಕ್ತ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವಿದ್ಯುತ್ ತಂತಿಯನ್ನು ಬದಲಿಸಬೇಕು. ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಗ್ರಾಪಂ ಮಾಜಿ ಸದಸ್ಯರಾದ ರಮೇಶ, ರಾಜೇಶ್ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net