ವ್ಯಕ್ತಿತ್ವ ವಿಕಸನಕ್ಕೆ ಎನ್ನೆಸ್ಸೆಸ್ ಸಹಕಾರಿ

ಯಳಂದೂರು ತಾಲೂಕಿನ ವಡಗೆರೆ ಗ್ರಾಮದಲ್ಲಿ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾಲಯದ ಇಂಜಿನಿಯರ್ ಕಾಲೇಜಿನ ವಿದ್ಯಾರ್ಥಿಗಳು ಗ್ರಾಮದಲ್ಲಿ ಸ್ವಚ್ಛತೆ ಮಾಡಿ ಕಸವನ್ನು ಸಂಗ್ರಹಿಸಿರುವುದು.
ಯಳಂದೂರು ತಾಲೂಕಿನ ವಡಗೆರೆ ಗ್ರಾಮದಲ್ಲಿ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾಲಯದ ಇಂಜಿನಿಯರ್ ಕಾಲೇಜಿನ ವಿದ್ಯಾರ್ಥಿಗಳು ಗ್ರಾಮದಲ್ಲಿ ಸ್ವಚ್ಛತೆ ಮಾಡಿ ಕಸವನ್ನು ಸಂಗ್ರಹಿಸಿರುವುದು.
Published on
ಯಳಂದೂರು: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸುವುದಕ್ಕೆ ಹಾಗೂ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕಾಗಿ ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿ ಎಂದು ಬೆಂಗಳೂರಿನ ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯ ಅಧ್ಯಾಪಕ ಮೋಹನ್ ಸಲಹೆ ನೀಡಿದರು. 
ತಾಲೂಕಿನ ವಡಗೆರೆ ಹಾಗೂ ಬಿಳಿಗಿರಿರಂಗನಬೆಟ್ಟದಲ್ಲಿ ಗುರುವಾರ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾಲಯದ  ಇಂಜಿನಿಯರ್ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 
ಶಿಕ್ಷಣದ ಜತೆಗೆ ಸಾಮಾಜಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇಂತಹ ಶಿಬಿರಗಳು ಉತ್ತಮ ಅಡಿಪಾಯವಾಗಲಿದೆ. ಪ್ರತಿಯೊಬ್ಬರೂ ಸೇವಾ ಮನೋಭಾವದ ಜತೆಗೆ ಬಾಂಧವ್ಯ ವೃದ್ಧಿಸಲು ಇವು ಕಾರಣವಾಗುತ್ತವೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ವ್ಯಕ್ತಿತ್ವ ಹಾಗೂ ಸಮಯ ಪ್ರಜ್ಞೆಯ ಅರಿವನ್ನು ಮೂಡಿಸುವುದರ ಜತೆಗೆ ವ್ಯಕ್ತಿತ್ವ ವಿಕಸನಗೊಳ್ಳಲು ಕಾರಣವಾಗುತ್ತದೆ ಎಂದರು.
ಶಿಬಿರದ ವಿದ್ಯಾರ್ಥಿಗಳು ವಡೆಗೆರೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಾಗೂ ಬಿದ್ದಾಂಜನೇಯಸ್ವಾಮಿ ದೇವಸ್ಥಾನದ ಸುತ್ತಮುತ್ತ  ಕಸ, ಪ್ಲಾಸ್ಟಿಕ್, ತ್ಯಾಜ್ಯ ಸೇರಿದಂತೆ ಇತರ ತ್ಯಾಜ್ಯವನ್ನು ಸಂಗ್ರಹಿಸಿ, ಅವುಗಳನ್ನು ತೆರವುಗೊಳಿಸುವ ಮೂಲಕ ಗ್ರಾಮೀಣ ಭಾಗದಲ್ಲಿ ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.
ಇಂಜಿನಿಯರ್ ಕಾಲೇಜಿನ ರಾಜೇಂದ್ರ, ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ಜಿಲ್ಲಾ ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ರಾಜೇಶ್, ವಿಶ್ವ, ಮಸಣಾಪುರ ವಿಜಯ್ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net