ಅಥ್ಲೆಟಿಕ್ಸ್‌ನಲ್ಲಿ ವಸತಿಶಾಲೆ ವಿದ್ಯಾರ್ಥಿಗಳ ಸಾಧನೆ

Achievements of residential school students in athletics
 ರಾಜ್ಯಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆಯಾದ ತೆರಕಣಾಂಬಿಯ ಮುರಾರ್ಜಿ ಶಾಲೆ ವಿದ್ಯಾರ್ಥಿಗಳು.  ಪ್ರಾಂಶುಪಾಲ ಮಹದೇವಪ್ರಸಾದ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಇದ್ದರು.
ರಾಜ್ಯಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆಯಾದ ತೆರಕಣಾಂಬಿಯ ಮುರಾರ್ಜಿ ಶಾಲೆ ವಿದ್ಯಾರ್ಥಿಗಳು. ಪ್ರಾಂಶುಪಾಲ ಮಹದೇವಪ್ರಸಾದ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಇದ್ದರು.
Published on: 

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತಾಲೂಕಿನ ತೆರಕಣಾಂಬಿಯ ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ವಿದ್ಯಾರ್ಥಿಗಳು ವಿಜೇತರಾಗುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಾರ್ವತಿ 100 ಮೀ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ಪ್ರಥಮ , 400 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವೈಯಕ್ತಿಕ ಚಾಂಪಿಯನ್ ಷಿಪ್ ತಮ್ಮದಾಗಿಸಿಕೊಂಡಿದ್ದಾರೆ. ಚೆಸ್‌ನಲ್ಲಿ ಪ್ರೀತಮ್ ಪ್ರಥಮ ಸ್ಥಾನ ದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net