ಕನಕದಾಸ ಜಯಂತಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ

ಎಡಿಸಿ ವಿ.ಪ್ರಿಯದರ್ಶಿನಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಚಾಮರಾಜನಗರ ಹಳೆ ಕೆಡಿಪಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ ಅವರು ಕನಕದಾಸ ಜಯಂತಿ ಕುರಿತು ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಆರ್.ಉಮೇಶ್, ಸಿ.ಎನ್.ಬಾಲರಾಜು, ನಟರಾಜು, ಎಂ.ಸ್ವಾಮಿ, ಬಿ.ಶಿವಲಿಂಗೇಗೌಡ, ಸಿ.ಆರ್.ಮಹೇಶ್, ಜಿ.ಬಂಗಾರು ಇತರರು ಇದ್ದರು.
ಚಾಮರಾಜನಗರ ಹಳೆ ಕೆಡಿಪಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ ಅವರು ಕನಕದಾಸ ಜಯಂತಿ ಕುರಿತು ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಆರ್.ಉಮೇಶ್, ಸಿ.ಎನ್.ಬಾಲರಾಜು, ನಟರಾಜು, ಎಂ.ಸ್ವಾಮಿ, ಬಿ.ಶಿವಲಿಂಗೇಗೌಡ, ಸಿ.ಆರ್.ಮಹೇಶ್, ಜಿ.ಬಂಗಾರು ಇತರರು ಇದ್ದರು.
Published on: 

ಚಾಮರಾಜನಗರ: ಜಿಲ್ಲಾಡಳಿತದಿಂದ ಎಲ್ಲರ ಸಹಕಾರದೊಂದಿಗೆ ಇದೇ ತಿಂಗಳ 27ರಂದು ನಗರದಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ತೀರ್ಮಾನಿಸಲಾಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ ಅವರ ಅಧ್ಯಕ್ಷತೆಯಲ್ಲಿ ಸಮುದಾಯ, ಸಮಾಜದ, ಸಂಘಟನೆಗಳ ಮುಖಂಡರು, ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಮುಖಂಡರು ಕಾರ್ಯಕ್ರಮ ಆಯೋಜನೆ ಕುರಿತು ಮಾತನಾಡಿ, ಅದ್ದೂರಿಯಾಗಿ ಕಾರ್ಯಕ್ರಮ ನಡೆಯಬೇಕು. ಪ್ರಮುಖ ರಸ್ತೆ ಮಾರ್ಗಗಳಲ್ಲಿ ಕನಕದಾಸರ ಅಲಂಕೃತ ಭಾವಚಿತ್ರದ ಮೆರವಣಿಗೆಯನ್ನು ಕಲಾ ತಂಡಗಳೊಂದಿಗೆ ನಡೆಸಬೇಕು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸ್ವಚ್ಛತೆ ಇರಬೇಕು. ತಳಿರು ತೋರಣಗಳಿಂದ ಅಲಂಕರಿಸಬೇಕು. ವೇದಿಕೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸಲಹೆ ನೀಡಿದರು.

ಕನಕದಾಸರ ವಿಚಾರ ಧಾರೆಗಳು ತಿಳಿಸಲು ಭಾಷಣಕಾರರನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮದ ಬಳಿಕ ಪೌರಾಣಿಕ ನಾಟಕ ಪ್ರದರ್ಶನ ಏರ್ಪಾಡು ಮಾಡಬೇಕು. ಕಾರ್ಯಕ್ರಮ ಸ್ಥಳದಲ್ಲಿ ಹೆಚ್ಚಿನ ಆಸನಗಳ ವ್ಯವಸ್ಥೆಯಾಗಬೇಕು. ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಲು ಸೂಚನೆ ನೀಡಬೇಕು ಎಂದು ಮುಖಂಡರು ಸಲಹೆ ನೀಡಿದರು.

ಎಲ್ಲರ ಸಲಹೆ ಅಭಿಪ್ರಾಯಗಳನ್ನು ಪಡೆದ ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಪ್ರಿಯದರ್ಶಿನಿ, ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಸಕಲ ವ್ಯವಸ್ಥೆಗಳೊಂದಿಗೆ ಅಧಿಕಾರಿಗಳು ಆಯೋಜಿಸಬೇಕು. ಹೆಚ್ಚು ಕಲಾ ತಂಡಗಳನ್ನು ನಿಯೋಜಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ತಳಿರು ತೋರಣಗಳಿಂದ ಅಲಂಕರಿಸಬೇಕು ಎಂದು ಸೂಚಿಸಿದರು.

ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ಶಿಷ್ಟಾಚಾರ ಪಾಲನೆಯಾಗಬೇಕು. ಪೌರಾಣಿಕ ನಾಟಕ ಪ್ರಾಯೋಜನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಕಾರ್ಯಕ್ರಮಕ್ಕೆ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಯಶಸ್ವಿಯಾಗಿ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಬೇಕು ಎಂದು ಪ್ರಿಯದರ್ಶಿನಿ ತಿಳಿಸಿದರು.

ಮುಖಂಡರಾದ ಆರ್.ಉಮೇಶ್, ಸಿ.ಎನ್.ಬಾಲರಾಜು, ನಟರಾಜು, ಎಂ.ಸ್ವಾಮಿ, ಬಿ.ಶಿವಲಿಂಗೇಗೌಡ, ಸಿ.ಆರ್.ಮಹೇಶ್, ಜಿ.ಬಂಗಾರು, ಬ್ಯಾಡಮೂಡ್ಲು ಬಸವಣ್ಣ, ಬಿ.ಮಹದೇವಸ್ವಾಮಿ, ಮಾದಾಪುರ ರವಿಕುಮಾರ್, ಜೆ.ನಟರಾಜು, ಮಹದೇವಸ್ವಾಮಿ, ಎಂ.ರಂಜು, ಸುಬ್ಬೇಗೌಡ, ಎಂ.ಸಿ.ರಾಜು, ಸೂರ್ಯಕುಮಾರ್, ನವೀನ್‌ಕುಮಾರ್, ಆರ್.ಶಿವಣ್ಣ, ನಂಜುಂಡೇಗೌಡ, ಸಿ.ಎಂ. ನರಸಿಂಹಮೂರ್ತಿ, ಇತರ ಮುಖಂಡರು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಿರಣ್‌ಕುಮಾರ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ. ನಾಗರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ್, ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.