ಸರ್ಕಾರದ ಸವಲತ್ತು ಪಡೆಯಲು ಸಂಘಟಿತರಾಗಿ

ಜಿಲ್ಲಾಧ್ಯಕ್ಷ ಗೌಡೇಗೌಡ ಹೇಳಿಕೆ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ
ಪುದು ರಾಮಾಪುರದಲ್ಲಿ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಲಾಯಿತು. ಗೌಡೇಗೌಡ, ಲೋಕೇಶ್‌ಗೌಡ, ರಾಜಮಣಿ, ರಾಜಣ್ಣ ಇತರರಿದ್ದರು.
ಪುದು ರಾಮಾಪುರದಲ್ಲಿ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಲಾಯಿತು. ಗೌಡೇಗೌಡ, ಲೋಕೇಶ್‌ಗೌಡ, ರಾಜಮಣಿ, ರಾಜಣ್ಣ ಇತರರಿದ್ದರು.
Published on

ಹನೂರು: ಸಮಸ್ಯೆಗಳು ಬಗೆಹರಿಯಬೇಕಾದರೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಬೇಕಾದರೆ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ (ಮೂಲ ಸಿದ್ಧಾಂತ) ಜಿಲ್ಲಾಧ್ಯಕ್ಷ ಗೌಡೇಗೌಡ ತಿಳಿಸಿದರು.

ತಾಲೂಕಿನ ಪುದು ರಾಮಾಪುರ ಗ್ರಾಮದಲ್ಲಿ ಬುಧವಾರ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿವೆ. ಆದರೆ ಕಾಡು ಪ್ರಾಣಿಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷೃ ವಹಿಸಿದೆ. ತಾಲೂಕಿನಲ್ಲಿ ಜಮೀನುಗಳ ಪಹಣಿ ಸಮಸ್ಯೆ ಇದೆ. ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ನೀಡುತ್ತಿಲ್ಲ. ಇತ್ತ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಇನ್ನು ಅನೇಕ ಸಮಸ್ಯೆಗಳಿಂದ ರೈತರು ತೊಂದರೆ ಎದುರಿಸುವಂತಾಗಿದೆ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಸಂಘಟಿತರಾಗಬೇಕು. ಇದಕ್ಕೆ ಗ್ರಾಮದಲ್ಲಿ ಉದ್ಘಾಟಿಸಿರುವ ಗ್ರಾಮ ಘಟಕ ಸ್ಫೂರ್ತಿಯಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಗ್ರಾಮ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜಮಣಿ, ಜಿಲ್ಲಾ ಉಪಾಧ್ಯಕ್ಷ ಲೋಕೇಶ್‌ಗೌಡ, ಹನೂರು ತಾಲೂಕು ಅಧ್ಯಕ್ಷ ರಾಜಣ್ಣ, ಚಾ.ನಗರ ತಾಲೂಕು ಅಧ್ಯಕ್ಷ ಸಂತೋಷ್, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ದಿಲೀಪ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಗ್ರಾಮ ಘಟಕದ ಅಧ್ಯಕ್ಷರಾದ ತಿರುಮಲೈ, ನಾಗರಾಜು ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net