ಜಿಲ್ಲಾ ರಜತ ಮಹೋತ್ಸವ : ರೂಪುರೇಷೆ ತಯಾರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

75de4df0-9a76-42f9-86a5-c57721c2870e
Published on

ಚಾಮರಾಜನಗರ: ಜಿಲ್ಲೆಗೆ ಇದೇ ಆಗಸ್ಟ್ 15ರಂದು 25 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಚರಣೆಗಾಗಿ ಅಗತ್ಯ ರೂಪು ರೇಷೆ ತಯಾರಿಸಬೇಕು. ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಕರೆತರುವ ಚಿಂತನೆಯಿದ್ದು ಆಗಸ್ಟ್ 25 ಅಥವಾ 26 ಅಥವಾ ಸೂಕ್ತ ದಿನಾಂಕ ನಿಗದಿಪಡಿಸಿ ರಜತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅಧಿಕಾರಿಗಳು ರಜತ ಮಹೋತ್ಸವ ಕಾರ್ಯಕ್ರಮ ಸಿದ್ದತೆಗಾಗಿ ಪೂರ್ವಭಾವಿ ಸಭೆಗಳನ್ನು ಕರೆದು ಚರ್ಚಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಸ್ಟ್ 13 ರಿಂದ 15ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಮತ್ತು ಆಗಸ್ಟ್ 14, 15ರಂದು ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು ಎಂದರು.

ಚಾಮರಾಜನಗರ ಜಿಲ್ಲೆ ರಚನೆಗೊಂಡು 25 ವರ್ಷಗಳು ಪೂರೈಸುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಆಚರಣೆÉಯನ್ನು ವಿಶಿಷ್ಟವಾಗಿ ಹಮ್ಮಿಕೊಳ್ಳಬೇಕಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲು ಚಿಂತನೆ ನಡೆಸಲಾಗಿದೆ. ಆಗಸ್ಟ್ 25 ಅಥವಾ 26 ಇಲ್ಲವೇ ಸೂಕ್ತ ದಿನಾಂಕವನ್ನು ನಿಗದಿ ಮಾಡಿಕೊಂಡು ರಜತಮಹೋತ್ಸವ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕಾಗಿ ಅಧಿಕಾರಿಗಳು ಅಭಿಪ್ರಾಯ ಸಂಗ್ರಹಣೆ, ಕಾರ್ಯಕ್ರಮ ರೂಪುರೇಷೆ, ಇನ್ನಿತರ ಸಿದ್ದತೆಗಳ ಸಂಬಂಧ ಸಭೆಗಳನ್ನು ನಡೆಸುವಂತೆ ತಿಳಿಸಿದರು.

ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಬೇಕು. ಈ ಅರ್ಥಪೂರ್ಣ ಸಮಾರಂಭವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಅನೇಕ ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕಿದೆ. ಇದಕ್ಕಾಗಿ ಅಧಿಕಾರಿಗಳು ಎಲ್ಲಾ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ನಿರ್ದೇಶನ ನಿಡಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net