ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ

009
Published on

ಹನೂರು: ಕ್ಷೇತ್ರದ ಜನರಿಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಪಟ್ಟಣದ ಆರ್.ಎಸ್. ದೊಡ್ಡಿಯ ಕನಕ ಸಮುದಾಯ ಭವನದಲ್ಲಿ ಭಾನುವಾರ ಕನಕ ಸಮುದಾಯ ಸಮಿತಿ ವತಿಯಿಂದ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹನೂರು ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಜನರಿಗೆ ಉತ್ತಮ ಸೇವೆ ನೀಡುವಂತೆ ತಿಳಿಸಲಾಗಿದೆ. ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಮುಖಂಡರಾದ ಯರಂಬಾಡಿ ಹುಚ್ಚಯ್ಯ, ಮಣಗಳ್ಳಿ ಶಿವಪ್ಪ, ಶಿವಮೂರ್ತಿ, ಮಲ್ಲು, ವೆಂಕಟೇಗೌಡ, ಜಗನ್ನಾಥ್, ನಾಗರಾಜು, ಶಿವರಾಮು ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net