ಮೌಲ್ಯಯುತ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಯಿರಿ

09raju3
Published on

ಚಾಮರಾಜನಗರ: ಮೌಲ್ಯಯುತ ಶಿಕ್ಷಣದ ಜತೆಗೆ ಜೀವನದಲ್ಲಿ ಸಂಸ್ಕಾರದ ಮೌಲ್ಯವನ್ನು ಕಲಿಯಬೇಕೆಂದು ಶ್ರೀಮುರುಘ ರಾಜೇಂದ್ರ ಮಠದ ಪೀಠಾಧಿಪತಿ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಕಿವಿಮಾತು ಹೇಳಿದರು.
ತಾಲೂಕಿನ ಮರಿಯಾಲ ಗ್ರಾಮದ ಶ್ರೀ ಮುರುಘರಾಜೇಂದ್ರ ಸ್ವಾಮಿ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ 3 ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಿದ್ದಮಲ್ಲೇಶ್ವರ ವಿರಕ್ತ ಮಠದ ಅಧ್ಯಕ್ಷ ಶ್ರೀ ಚನ್ನಬಸವಸ್ವಾಮೀಜಿ ಮಾತನಾಡಿ, ವಿದ್ಯಾಭ್ಯಾಸದ ಜತೆಗೆ ಮೌಲ್ಯಯುತ ಕೌಶಲ ಅಳವಡಿಕೆಯ ಬಗ್ಗೆ ಪಾಲಕರು ಜವಾಬ್ದಾರಿ ಅರಿತುಕೊಳ್ಳಬೇಕೆಂದು ತಿಳಿಸಿದರು.

ಇದೇ ವೇಳೆ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಭಾರತಿ, ಮೈಸೂರಿನ ಆರ್‌ಐಇ ಎನ್‌ಸಿಇರ್‌ಟಿ ಪ್ರಾಂಶುಪಾಲ ವೈ.ಶ್ರೀಕಾಂತ್ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎಲ್.ಸುರೇಶ್, ಶಾಲೆಯ ಆಡಳಿತಾಧಿಕಾರಿ ನಾಗರಾಜು, ಪ್ರಾಂಶುಪಾಲ ಸುಭಾಷ್ ಹಾಗೂ ಶಾಲೆ ಆಡಳಿತ ವರ್ಗ ಮತ್ತು ಶಾಲೆಯ ನೌಕರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net